27.7 C
Sullia
Sunday, March 8, 2026

ಸುಳ್ಯ: ಕೆ.ವಿ.ಜಿ. ಆರ್ಯುವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಾರ್ಷಿಕ ಸಾಹಿತ್ಯಿಕ ಸ್ಪರ್ಧೆ “ವಾಗ್ವಿಲಾಸ 2025”

ನ್ಯೂಸ್ ನಾಟೌಟ್ : ಸುಳ್ಯದ ಕೆ.ವಿ.ಜಿ. ಆರ್ಯುವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಾರ್ಷಿಕ ಸಾಹಿತ್ಯಿಕ ಸ್ಪರ್ಧೆ “ವಾಗ್ವಿಲಾಸ 2025” ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಡಾ. ಲೀಲಾಧರ್ ಡಿ.ವಿ. ಉದ್ಘಾಟಿಸಿದರು.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಕಾಲೇಜಿನ ವಿದ್ಯಾರ್ಥಿಗಳು ಉತ್ಸುಕತೆಯಿಂದ ವಿವಿಧ ಸಾಹಿತ್ಯಿಕ ಸ್ಪರ್ಧೆಗಳಲ್ಲಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ವಿನಯ್ ಶಂಕರ್ ಭಾರಧ್ವಾಜ್, ಕಾರ್ಯಕ್ರಮದ ಸಂಯೋಜನಾಧಿಕರಾದ ಡಾ. ಹರ್ಷಿತಾ ಎಂ, ಸಾಹಿತ್ಯಿಕ ಸಮಿತಿಯ ಸದಸ್ಯರು, ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರು ಹಾಗೂ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ತನುಷಾ ಎ., ಹಾಗೂ ತೇಜಸ್ ಟಿ. ಆರ್. ನಿರೂಪಿಸಿ, ಅಮೂಲ್ಯ ಸಿ. ಸ್ವಾಗತಿಸಿ, ಚಿನ್ಮಯಿ ಹಾಗೂ ಮೌಲ್ಯ ಪ್ರಾರ್ಥಿಸಿದರು.

Related Articles

LEAVE A REPLY

Please enter your comment!
Please enter your name here

Latest Articles