ನ್ಯೂಸ್ ನಾಟೌಟ್: ತನ್ನ ಸ್ವಂತ ಪತ್ನಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ವ್ಯಕ್ತಿಯೊಬ್ಬ ಮನಬಂದಂತೆ ಹಿಗ್ಗಾಮುಗ್ಗಾ ಥಳಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಜುಲೈ 14 ರಂದು ಆಗ್ರಾದ ಸಿಕಂದರಾ ಪೊಲೀಸ್ ಠಾಣೆ ವ್ಯಾಪ್ತಿಯ ಅರ್ಸೇನಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಈ ಸಂಬಂಧ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. 22 ಸೆಕೆಂಡ್ ಇರುವ ಈ ವೀಡಿಯೋದಲ್ಲಿ ಕುಸುಮಾ ದೇವಿ ಅವರನ್ನು ಪತಿ ಶಯಂಬಿಹಾರಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾನೆ. ನಂತರ ಆಕೆಯನ್ನು ಸಡಿಲಗೊಳಿಸಿ ತನ್ನ ಹಿಂದೆ ಧರಧರನೇ ಎಳೆದುಕೊಂಡು ಹೋಗಿರುವುದನ್ನು ಕಾಣಬಹುದಾಗಿದೆ.
ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ಆರೋಪಿ ಹಾಗೂ ಆತನ ತಾಯಿ ವಿರುದ್ಧ ಮಹಿಳೆ ದೂರು ದಾಖಲಿಸಿದ್ದು, ಇದೀಗ ನಾಪತ್ತೆಯಾಗಿದ್ದಾರೆ ಎಂದು ಸಿಕಂದರಾ ಪೊಲೀಸ್ ಠಾಣೆಯ ಉಸ್ತುವಾರಿ ಆನಂದ್ ಕುಮಾರ್ ಶಾಹಿ ತಿಳಿಸಿದ್ದಾರೆ.