ನ್ಯೂಸ್ ನಾಟೌಟ್: ಸುಳ್ಯದ ಸರ್ಕಾರಿ ಆಸ್ಪತ್ರೆ ವಠಾರದಲ್ಲಿ ಭಾನುವಾರ ಸ್ವಚ್ಛತಾ ಕಾರ್ಯಕ್ರಮ ಆಯೋಜಿಸಲಾಯಿತು.
ಗುತ್ತಿಗಾರಿನ ವೀರ ಮಾರುತಿ ಸ್ಪೋರ್ಟ್ಸ್ ಕ್ಲಬ್ ನ ಸದಸ್ಯರು ಸ್ವಯಂ ಪ್ರೇರಣೆಯಿಂದ ಬಂದು ಆಸ್ಪತ್ರೆ ವಠಾರದಲ್ಲಿ ಬೆಳೆದಿರುವ ಕಳೆಗಳನ್ನು ಕಿತ್ತು, ತ್ಯಾಜ್ಯಗಳನ್ನು ವಿಲೇವಾರಿ ಮಾಡಿದರು. ಸಂಘಟನೆಯ ಈ ಕಾರ್ಯ ಆಸ್ಪತ್ರೆಯ ರಕ್ಷಾ ಸಮಿತಿಯ ಸದಸ್ಯರು ಶ್ಲಾಘಿಸಿದ್ದಾರೆ.













