ನ್ಯೂಸ್ ನಾಟೌಟ್: ಪ್ರತಿಭಟನೆ ವೇಳೆ ಅನಗತ್ಯವಾಗಿ ಲಾಠಿ ಬೀಸಿದ ಪೊಲೀಸರ ವಿರುದ್ಧ ಸೂಕ್ತವಾದ ಕ್ರಮ ತೆಗೆದುಕೊಳ್ಳಬೇಕೆಂದು ಬಿಜೆಪಿ ಕಾರ್ಯಕರ್ತರು ಹಾಗೂ ಪ್ರವೀಣ್ ಕುಟುಂಬಸ್ಥರು ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಒತ್ತಾಯಿಸಿದ್ದಾರೆ.
ಗುರುವಾರ ಅಲೋಕ್ ಕುಮಾರ್ ಮೃತ ಪ್ರವೀಣ್ ಅವರ ಮನೆಗೆ ಭೇಟಿಕೊಟ್ಟಾಗ ಸ್ಥಳದಲ್ಲಿದ್ದ ಬಿಜೆಪಿ ಕಾರ್ಯಕರ್ತರು ಪೊಲೀಸರ ವರ್ತನೆಯನ್ನು ಖಂಡಿಸಿದರು. ಸುಳ್ಯ ಸರ್ಕಲ್ ಇನ್ಸ್ಪೆಕ್ಟರ್ ನವೀನಚಂದ್ರ ಜೋಗಿ, ಸುಬ್ರಹ್ಮಣ್ಯ ನಗರ ಠಾಣೆಯ ಪಿಎಸ್ಐ ಜಂಬೂರಾಜ್ ಮಹಾಜನ್, ಪುತ್ತೂರು ನಗರ ಠಾಣೆಯ ಪಿಎಸ್ಐ ರಾಜೇಶ್ , ಬೆಳ್ಳಾರೆ ಠಾಣೆಯ ಹೆಡ್ ಕಾನ್ಸ್ಟೆಬಲ್ ಬಾಲಕೃಷ್ಣ ಹಾಗೂ ಕಾನ್ಸ್ಟೆಬಲ್ ಮಂಜುನಾಥ ಅವರು ಕಾರ್ಯಕರ್ತರ ಮೇಲೆ ವಿನಾ ಕಾರಣ ಹಲ್ಲೆ ನಡೆಸಿದ್ದಾರೆ. ಅವರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.