ನ್ಯೂಸ್ ನಾಟೌಟ್: ಮಹಮ್ಮದ್ ಫಾಝಿಲ್ ಹತ್ಯೆ ತನಿಖೆಯ ಹಂತದಲ್ಲಿದ್ದು, ಕಾರಣ ಯಾವ ಕಾರಣಕ್ಕೆ ಹತ್ಯೆಯಾಗಿದೆ ಎಂಬುದನ್ನು ನಿಖರವಾಗಿ ಹೇಳಲು ಸಾಧ್ಯವಿಲ್ಲ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಕೊಲೆ ಸಂಬಂಧಿಸಿದ ವಿಚಾರದ ಬಗ್ಗೆ ಹಾಕುತ್ತಿರುವ ಪೋಸ್ಟ್ ಗಳನ್ನು ಗಮನಿಸಲಾಗುತ್ತಿದೆ. ಸೈಬರ್ ಕ್ರೈ ಪೊಲೀಸರ ಸಹಕಾರ ಪಡೆದು, ಇಂತಹವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರು ಪಾಝಿಲ್ ತಂದೆ ಹಾಗೂ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.