ನ್ಯೂಸ್ ನಾಟೌಟ್ : ಜಾತಿಗಣತಿಗೆ (Caste Census) ತೆರಳಿದ್ದಾಗ ದುರಂತವೊಂದು ಸಂಭವಿಸಿದ್ದು, ಇಬ್ಬರು ಶಿಕ್ಷಕರು ಗಾಯಗೊಂಡ ಘಟನೆ ಹೆಚ್.ಡಿ.ಕೋಟೆ (H.D Kote) ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ. ಕಾರು, ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಬೂದನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಸ್ವಾಮೀಗೌಡ ಹಾಗೂ ಸಹ ಶಿಕ್ಷಕಿ ಮಧುಶ್ರೀ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮುಖ್ಯಶಿಕ್ಷಕನ ಕಾಲು ಮುರಿದಿದೆ. ಸಹ ಶಿಕ್ಷಕಿಗೆ ಸಣ್ಣಪುಟ್ಟ ಗಾಯವಾಗಿದೆ. ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.













