27.7 C
Sullia
Sunday, March 8, 2026

ದೀಪಾವಳಿಗೆಂದು ಮನೆ ಎದುರು ಹಚ್ಚಿದ್ದ ದೀಪ ಹೊತ್ತಿ ಉರಿದು ಮನೆ ಸುಟ್ಟು ಭಸ್ಮ ; 7 ಜನರಿಗೆ ಗಾಯ

ನ್ಯೂಸ್ ನಾಟೌಟ್ : ದೇಶಾದ್ಯಂತ ದೀಪಾವಳಿ ಹಬ್ಬ ಆರಂಭಕ್ಕೆ ಕ್ಷಣಗಣನೆ. ಬಾಗಲಕೋಟೆ ತಾಲ್ಲೂಕಿನ ಗದ್ದನಕೇರಿ ಕ್ರಾಸ್​​​ನಲ್ಲಿರುವ ಮನೆಯೊಂದರ ಬಾಗಿಲು ಎದುರು ಹಚ್ಚಿದ್ದ ದೀಪದಿಂದ ಬೆಂಕಿ ತಗುಲಿ ಏಳು ಜನರಿಗೆ ಗಾಯವಾಗಿರುವ ಘಟನೆ ಬಗ್ಗೆ ವರದಿಯಾಗಿದೆ. ಅದೃಷ್ಟವಶಾತ್​​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಏನಿದು ಘಟನೆ?

ಉಮೇಶ್ ಮೇಟಿ​​ ಎಂಬುವವರ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇದೇ ಕಟ್ಟಡದಲ್ಲಿ ರಾಜೇಂದ್ರ ತಪಶೆಟ್ಟಿ ಕುಟುಂಬ ಸೇರಿ ಮತ್ತೊಂದು ಕುಟುಂಬ ಬಾಡಿಗೆಗೆ ಇದ್ದರು. ರಾಜೇಂದ್ರ ತಪಶೆಟ್ಟಿ ಕುಟುಂಬಸ್ಥರು ಮನೆ ಎದುರು ದೀಪ ಹಚ್ಚಿದ್ದರು.

ಆ ದೀಪದ ಬೆಂಕಿ ಮನೆ ಎದುರಿಗೆ ಬಿದ್ದ ಆಯಿಲ್​​ಗೆ ತಗುಲಿ ಬೆಂಕಿ ಹೊತ್ತಿದೆ. ಮನೆ ಮುಂದಿನ ಎರಡು ಬೈಕ್ ಸುಟ್ಟು, ಮನೆಗೂ ಬೆಂಕಿ ಪ್ರವೇಶಿಸಿದೆ. ಅಡುಗೆ ಮನೆಯ ಸಿಲಿಂಡರ್ ಕೂಡ ಸೋರಿ ಮತ್ತಷ್ಟು ಬೆಂಕಿಯ ತೀವ್ರತೆ ಹೆಚ್ಚಾದೆ. ನೋಡನೋಡುತ್ತಿದ್ದಂತೆ ಮನೆ ಸುಟ್ಟು ಕರಕಲಾಗಿ ಹೋಗಿದೆ.

ರಾಜೇಂದ್ರ ತಪಶೆಟ್ಟಿ ಬೋರ್ ವೆಲ್​​​ ಕೆಲಸ ಮಾಡುತ್ತಿದ್ದರು. ಮನೆ ಎದುರು ಬೋರ್ ವೆಲ್​​​ ವಾಹನಗಳ ಆಯಿಲ್, ಗ್ರೀಸ್ ಬಿದ್ದಿತ್ತು. ದೀಪದ ಬೆಂಕಿ ಆಯಿಲ್, ಗ್ರೀಸ್​​ಗೆ ತಗುಲಿ ನಂತರ ಬೈಕ್ ಮತ್ತು ಮನೆಗೂ ವ್ಯಾಪಿಸಿದೆ. ಈ ವೇಳೆ ಹೊರಗಡೆ ಓಡಿ ಬಂದು ರಾಜೇಂದ್ರ ತಪಶೆಟ್ಟಿ ಕುಟುಂಬ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದೆ

Related Articles

LEAVE A REPLY

Please enter your comment!
Please enter your name here

Latest Articles