ನ್ಯೂಸ್ ನಾಟೌಟ್ : ಮಾರಕಾಸ್ತ್ರಗಳಿಂದ ಪ್ರವೀಣ್ ನೆಟ್ಟಾರು ಹತ್ಯೆ ಮಾಡಿ ಪರಾರಿಯಾದ ಮೂವರು ಆರೋಪಿಗಳ ಗುರುತು ಪತ್ತೆ ಹಚ್ಚಲಾಗಿದೆ ಎಂದು ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಮೂವರ ಹೆಸರು, ವಿಳಾಸ, ಭಾವಚಿತ್ರ ದೊರೆತಿದೆ. ಆರೋಪಿಗಳು ಬಚ್ಚಿಟ್ಟುಕೊಂಡಿದ್ದು, ಅವರ ವಿರುದ್ಧ ಬಂಧನ ವಾರಂಟ್ ಹೊರಡಿಸಿ ಆಸ್ತಿ ಮುಟ್ಟುಗೋಲು ಹಾಕಲು ಚಿಂತನೆ ನಡೆಯುತ್ತಿದೆ. ನಗರದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಕರಣದಲ್ಲಿ ಈಗಾಗಲೇ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಮುಖ್ಯ ಆರೋಪಿಗಳು ಮನೆ ಖಾಲಿ ಮಾಡಿ ತಲೆಮರೆಸಿಕೊಂಡಿದ್ದು, ಶೀಘ್ರವಾಗಿ ಅವರನ್ನು ಬಂಧಿಸಲಾಗುವುದು, ಆರೋಪಿಗಳು ತಲೆಮರೆಸಿಕೊಳ್ಳಲು ಸಹಕಾರ ನೀಡಿದವರನ್ನೂ ಬಿಡುವುದಿಲ್ಲ. ಕರ್ನಾಟಕ ಪೊಲೀಸ್ ಮತ್ತು ಎನ್ಐಎ ಜತೆಯಾಗಿ ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.