ನ್ಯೂಸ್ ನಾಟೌಟ್: ಪಯಸ್ವಿನಿ ನದಿಯ ಪ್ರವಾಹದ ಹೊಡೆತಕ್ಕೆ ಸಿಕ್ಕಿ ಮನೆಯ ವಸ್ತುಗಳೆಲ್ಲ ನೀರು ಪಾಲಾಗಿ ಕಾಳಜಿ ಕೇಂದ್ರದಲ್ಲಿರುವ ವಿದ್ಯಾರ್ಥಿಯೊಬ್ಬನ ಕುಟುಂಬಕ್ಕೆ ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು, ಸಿಬ್ಬಂದಿ ವರ್ಗ ಆರ್ಥಿಕ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ.
ಅಂತಿಮ ಬಿಎ ಪದವಿ ವ್ಯಾಸಂಗ ಮಾಡುತ್ತಿರುವ ಶ್ರೀಜಿತ್ ಎಂಬ ವಿದ್ಯಾರ್ಥಿಯ ಕುಟುಂಬ ಸಂಪಾಜೆಯಲ್ಲಿ ಉಂಟಾಗಿದ್ದ ಪ್ರವಾಹದ ವೇಳೆ ಮನೆಯಲ್ಲಿದ್ದ ವಸ್ತುಗಳೆಲ್ಲ ನೀರುಪಾಲಾಗಿದ್ದವು. ಸದ್ಯ ಅವರ ಕುಟುಂಬ ಗೂನಡ್ಕದ ಕಾಳಜಿ ಕೇಂದ್ರದಲ್ಲಿದ್ದಾರೆ. ಈ ಬಡ ಕುಟುಂಬಕ್ಕೆ ನೆರವಾಗಬೇಕು ಅನ್ನುವ ದೃಷ್ಟಿಯಿಂದ ಕಾಲೇಜಿನ ಪ್ರಾಂಶುಪಾಲರಾಗಿರುವ ಸತೀಶ್ ಕೊಯಿಂಗಾಜೆಯವರು ತಮ್ಮ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗವನ್ನು ಸೇರಿಸಿಕೊಂಡು ಒಟ್ಟು 41 ಸಾವಿರ ರೂ. ಸಂಗ್ರಹಿಸಿ ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ.