ನ್ಯೂಸ್ ನಾಟೌಟ್: ಮಳೆಯಿಂದ ಹಾನಿಗೊಳಗಾಗಿರುವ ವಿವಿಧ ಪ್ರದೇಶಗಳಿಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಎರಡು ದಿನಗಳ ಕಾಲ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈ ಹಿನ್ನಲೆ ವಿಪಕ್ಷ ನಾಯಕ ಸಿದ್ದರಾಮಯ್ಯ ಗುರವಾರ ಕೊಡಗು ಜಿಲ್ಲೆಗೆ ಭೇಟಿ ನೀಡಿದರು. ಈ ವೇಳೆ ಅವರಿಗೆ ಕಪ್ಪು ಪಟ್ಟಿ ಪ್ರದರ್ಶನ ಮಾಡಿರೋ ಘಟನೆ ನಡೆದಿದೆ. ಇತ್ತ ಕಾಂಗ್ರೆಸ್ ಕಾರ್ಯಕರ್ತರು ಸಿದ್ದರಾಮಯ್ಯ ಅವರಿಗೆ ಅದ್ಧೂರಿ ಸ್ವಾಗತ ಕೋರಿದ್ದಾರೆ.
ಪೊನ್ನಂಪೇಟೆ ತಾಲೂಕಿನ ಆನೆ ಚೌಕೂರು ಗೇಟ್ ಬಳಿ ಕೊಡಗು ಜಿಲ್ಲೆಗೆ ಪ್ರವೇಶ ಪಡೆಯುತ್ತಿದ್ದಂತೆ ಹೂಮಾಲೆ ಹಾಕಿ ಕಾರ್ಯಕರ್ತರು ಸ್ವಾಗತಿಸಿದರು. ಇತ್ತ ಕೊಡಗಿಗೆ ಆಗಮಿಸುತ್ತಿದಂತೆ ತಿತಿಮತಿ ಬಳಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನ ಮಾಡಿ ಫೇರಾವ್ ಹಾಕಿದರು. ನಿನ್ನೆಯಿಂದಲೇ ಸಾಮಾಜಿಕ ಜಾಲತಾಣಗಳಲ್ಲಿ ಸಿದ್ದರಾಮಯ್ಯ ಆಗಮನಕ್ಕೆ ವಿರೋಧ ವ್ಯಕ್ತಪಡಿಸಿದ್ದ ಬಿಜೆಪಿ ಕಾರ್ಯಕರ್ತರು, ‘ಗೋ ಬ್ಯಾಕ್ ಸಿದ್ದು ಖಾನ್” ಅಂತ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.