ನ್ಯೂಸ್ ನಾಟೌಟ್ :ಸ್ಯಾಂಡಲ್ವುಡ್ನ ಮೋಹಕ ತಾರೆ ರಮ್ಯಾ ಶಕ್ತಿ ದೇವತೆ ಬಂಡೆ ಮಹಾಕಾಳಿ ದೇವಸ್ಥಾನಕ್ಕೆ (Bande Mahakali Temple) ಭೇಟಿ ನೀಡಿದ್ದಾರೆ. ದೀಪಾವಳಿ ಅಮವಾಸ್ಯೆಯ ಹಿನ್ನೆಲೆ ದೇಗುಲಕ್ಕೆ ಭೇಟಿ ನೀಡಿ ಅಮ್ಮನವರ ಆಶೀರ್ವಾದ ಪಡೆದಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಬಂಡೆ ಮಹಾಕಾಳಿ ದರ್ಶನ ಪಡೆದಿದ್ದಾರೆ.ನಟಿ ರಮ್ಯಾ ದೇವಸ್ಥಾನಕ್ಕೆ ಭೇಟಿ ನೀಡಿದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.ದೀಪಾವಳಿ ಹಬ್ಬದ ಪ್ರಯುಕ್ತ ಮಹಾಕಾಳಿ ದೇವಿಯ ದರ್ಶನ ಪಡೆದುಕೊಂಡಿದ್ದಾರೆ.













