27.7 C
Sullia
Sunday, March 8, 2026

ಕಾಂತಾರ ಚಾಪ್ಟರ್ 1 ಸಿನಿಮಾಗೆ ಭರ್ಜರಿ ರೆಸ್ಪಾನ್ಸ್: ಇಂಗ್ಲೀಷ್ ಗೂ ಡಬ್ ಆದ ಭಾರತದ ಮೊಟ್ಟ ಮೊದಲ ಚಿತ್ರ!

ನ್ಯೂಸ್ ನಾಟೌಟ್ ; ಕಾಂತಾರ ಸಿನಿಮಾ ಬಿಡುಗಡೆಯಾಗಿ 21ನೇ ದಿನಕ್ಕೆ ಕಾಲಿಟ್ಟಿದೆ. ಈ ಸಿನಿಮಾ ಇನ್ನು ಹೊಸ ಹೊಸ ದಾಖಲೆಗಳನ್ನು ಸೃಷ್ಟಿ ಮಾಡುತ್ತಲೇ ಇದೆ.ಇದೀಗ ದೀಪಾವಳಿ ಹಬ್ಬದ ಈ ಸಂದರ್ಭದಲ್ಲಿ ಹೊಂಬಾಳೆ ಫಿಲ್ಮ್ಸ್ ಹೊಸ ಸಾಹಸಕ್ಕೆ ಕೈ ಹಾಕಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಈಗಾಗಲೇ ಹಲವು ಭಾಷೆಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಚಿತ್ರ, ಇದೀಗ ಇಂಗ್ಲೀಷ್ ಭಾಷೆಯಲ್ಲೂ ತೆರೆಕಾಣಲು ಸಿದ್ಧವಾಗಿದೆ. ಇಂಗ್ಲಿಷ್‌ಗೆ ಡಬ್ ಮಾಡಿ ವಿಶ್ವದಾದ್ಯಂತ ರಿಲೀಸ್ ಮಾಡುವುದಕ್ಕೆ ಹೊಂಬಾಳೆ ಫಿಲ್ಮ್ಸ್ ಸಿದ್ಧತೆಗಳನ್ನು ಮಾಡಿಕೊಂಡಿದೆ. ಶೀಘ್ರದಲ್ಲೇ ಕನ್ನಡ ಸಿನಿಮಾ ಗ್ಲೋಬಲ್ ಲೆವೆಲ್‌ನಲ್ಲಿ ಸದ್ದು ಮಾಡಲಿದೆ.

ಇದೇ ಅಕ್ಟೋಬರ್ 31ಕ್ಕೆ ಕಾಂತಾರ ಚಾಪ್ಟರ್ 1 ಚಿತ್ರದ ಇಂಗ್ಲಿಷ್ ಅವತರಣಿಕೆಯ ಚಿತ್ರ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಹೀಗಾಗಿ ಚಿತ್ರತಂಡ ಜಾಗತಿಕ ಮಟ್ಟದಲ್ಲಿ ಪ್ರಚಾರ ಶುರು ಮಾಡುವ ಸಾಧ್ಯತೆಯಿದೆ. ವರ್ಲ್ಡ್‌ವೈಡ್ ಆಡಿಯನ್ಸ್ ರೀಚ್ ಮಾಡುವುದಕ್ಕೆ ಹೊಂಬಾಳೆ ಫಿಲ್ಮ್ಸ್ ಏನು ಪ್ಲ್ಯಾನ್ ಮಾಡಿದೆ ಅನ್ನೋದು ಇನ್ನಷ್ಟೇ ಗೊತ್ತಾಗಬೇಕು.

Related Articles

LEAVE A REPLY

Please enter your comment!
Please enter your name here

Latest Articles