ನ್ಯೂಸ್ ನಾಟೌಟ್ : ಇತ್ತೀಚೆಗೆ ಆತ್ಮಹತ್ಯೆಯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ನಡುವೆಯೇ ಬೆಂಗಳೂರಿನಲ್ಲಿ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕನೊಬ್ಬ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಮಹಡಿಯಲ್ಲಿ ನೇಣಿಗೆ ಶರಣಾದ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡಿನ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಗ್ಗೆಯಷ್ಟೇ ಅರಂತೋಡಿನ ಹೊನ್ನಪ್ಪ ಮಡಿವಾಳ ರವರ ಮಗ ಕೇಶವ (32) ಮನೆಯವರು ದೇವಸ್ಥಾನಕ್ಕೆ ಹೋಗಿದ್ದ ಸಂದರ್ಭದಲ್ಲಿ ನೇಣು ಬಿಗಿದುಕೊಂಡಿದ್ದಾನೆ. ಸದ್ಯ ಡೆತ್ ನೋಟ್ ಸಿಕ್ಕಿದೆ ಎನ್ನಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.