ಸುಳ್ಯ

ಸುಳ್ಯ:ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಸಂಭ್ರಮದ ಉತ್ಕರ್ಷ – 2k25,ಪುಟಾಣಿಗಳಿಂದ ಸಾಂಸ್ಕೃತಿಕ ವೈವಿಧ್ಯ

43
Spread the love

ನ್ಯೂಸ್ ನಾಟೌಟ್: ಸುಳ್ಯದ ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ 3ನೇ ವರ್ಷದ ವಾರ್ಷಿಕೋತ್ಸವವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಕರ್ನಾಟಕ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಇದರ ಅಧ್ಯಕ್ಷ ಸದಾನಂದ ಮಾವಜಿ ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಬೆಂಗಳೂರಿನ ಆಡೆನ್ ಇನ್ಸ್ಟಿಟ್ಯೂಟ್ ಆಫ್ ಎಜ್ಯುಕೇಶನ್ ಇದರ ನಿರ್ದೇಶಕ ಹರಿ ಕುಮಾರ್ ಉಪಸ್ಥಿತರಿದ್ದರು. ಗೌರವ ಉಪಸ್ಥಿತಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ಇದರ ಅಧ್ಯಕ್ಷ ಚಂದ್ರಶೆಖರ್ ಪೇರಾಲು, ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯ ಇದರ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ. ಕೆ.ಟಿ. ವಿಶ್ವನಾಥ ಉಪಸ್ಥಿತರಿದ್ದರು.

ಅಂಜಲಿ ಮೊಂಟೆಸ್ಸರಿ ಸ್ಕೂಲ್ ಇದರ ಅಧ್ಯಕ್ಷ ಶುಭಕರ ಬಿ.ಸಿ. ಹಾಗೂ ನಿರ್ದೇಶಕಿ ಸಿ.ಗೀತಾಂಜಲಿ ಟಿ.ಜಿ. ಹಾಜರಿದ್ದರು. ಪೋಷಕಿ ವಿನುತ ಕಾರ್ಯಕ್ರಮ ನಿರೂಪಿಸಿದರು. ಅಕ್ಷತಾ ಸ್ವಾಗತಿಸಿದರು. ಜ್ಯೋತಿ ವಂದನಾರ್ಪಣೆಗೈದರು. ಸಂಸ್ಥೆಯ ಪುಟಾಣಿಗಳು ಪ್ರಾರ್ಥಿಸಿದರು. ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ವೈವಿಧ್ಯ ನಡೆಯಿತು.

See also  ಸುಳ್ಯ: ಬಾಳಿ ಬದುಕಬೇಕಾಗಿದ್ದ ಯುವಕನ ಬಾಳಲ್ಲಿ ವಿಧಿಯಾಟ..!ಜಾಂಡೀಸ್‌ಗೆ ಕೊನೆಯುಸಿರೆಳೆದ ಪ್ರಶಾಂತ್
  Ad Widget   Ad Widget   Ad Widget   Ad Widget