ಕರಾವಳಿರಾಜಕೀಯಸುಳ್ಯ

ಪುತ್ತೂರಿನಲ್ಲಿ ಬಿಜೆಪಿ ಮುಖಂಡರ‌ ಭಾವಚಿತ್ರಕ್ಕೆ ಚಪ್ಪಲಿ ಹಾರ ಪ್ರಕರಣ! ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಗೂಬೆ ಕೂರಿಸುವ ಯತ್ನ: ಶಾಸಕ ಅಶೋಕ್ ರೈ ಆರೋಪ!

141

ನ್ಯೂಸ್ ನಾಟೌಟ್ : ಪುತ್ತೂರು ಬಸ್ ನಿಲ್ದಾಣದ ಬಳಿ ಬಿಜೆಪಿ ಮುಖಂಡರ‌ ಭಾವ ಚಿತ್ರವಿರುವ ಬ್ಯಾನರನ್ನು ಹಾಕಿ ಅದಕ್ಕೆ ಚಪ್ಪಲಿ ಹಾರ ಹಾಕಿರುವ ಘಟನೆ ಇಂದು ವರದಿಯಾಗಿತ್ತು.ಆದರೆ ಈ ಕೃತ್ಯ ಎಸಗಿದವರು ಯಾರು ಎಂಬುದರ ಬಗ್ಗೆ ಭಾರಿ ಚರ್ಚೆಗಳು ಸಾರ್ವಜನಿಕ ವಲಯದಿಂದ ಕೇಳಿ ಬಂದಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ತನಿಖೆ ಮಾಡಿ ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪುತ್ತೂರಿನ ನೂತನ ಶಾಸಕ ಅಶೋಕ್‌ ಕುಮಾರ್‌ ರೈ ಆಗ್ರಹಿಸಿದ್ದಾರೆ.

ಘಟನೆ ನಡೆದ ಸುತ್ತಮುತ್ತಲಿನ ಸಿಸಿ ಕ್ಯಾಮರಾ ಪರಿಶೀಲಿಸಿ ಆರೋಪಿಗಳನ್ನು ಪೊಲೀಸರು ಪತ್ತೆ ಮಾಡಬೇಕು. ಘಟನೆಯನ್ನು ಖಂಡಿಸಿ ಬಿಜೆಪಿಯವರು ನಡೆಸಿದ ಪ್ರತಿಭಟನೆಯಲ್ಲಿ ಮಾಜಿ ಶಾಸಕರು ಪರೋಕ್ಷವಾಗಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಗೂಬೆ ಕೂರಿಸುವ ಯತ್ನವನ್ನು ಮಾಡಿದ್ದು ಇದನ್ನು ನಾನು ಖಂಡಿಸುತ್ತೇನೆ ಎಂದಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಎಂದಿಗೂ ಇಂತಹ ನೀಚ‌ಕೃತ್ಯಕ್ಕೆ ಕೈ ಹಾಕುವುದಿಲ್ಲ. ನಮಗೆ ಯಾರ ಮೇಲೆಯೂ ದ್ವೇಷವಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಗೆ ಮತದಾರ ನೀಡಿದ ಜನ ಬೆಂಬಲವನ್ನು ಕಂಡು ಬಿಜೆಪಿಗೆ ಆಘಾತವಾಗಿದೆ. ಹತಾಶರಾಗಿ ಏನೇನೋ ಹೇಳಿಕೆ ನೀಡುತ್ತಿದ್ದಾರೆ. ಪ್ರತಿಭಟನೆ ನಡೆಸುವುದು ಬಿಜೆಪಿಗರ ಕಾಯಕವಾಗಿದೆ. ಅವರದೇ ಸರಕಾರ ಇರುವಾಗಲೂ ಮಾಡಿದ್ದರು. ಈಗಲೂ ಮಾಡುತ್ತಲೇ ಇದ್ದಾರೆ ಎಂದು ಲೇವಡಿ ಮಾಡಿದರು.

See also  ಐ.ಪಿ.ಎಸ್ ಅಧಿಕಾರಿಗೆ ಗುದ್ದಿದ ಸಚಿವರ ಬೆಂಗಾವಲು ವಾಹನ..! ಇಲ್ಲಿದೆ ವೈರಲ್ ವಿಡಿಯೋ
  Ad Widget   Ad Widget   Ad Widget   Ad Widget   Ad Widget   Ad Widget