ಚಿಕ್ಕಮಗಳೂರು

ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ;ರಸ್ತೆ ಮಧ್ಯೆ ಧಗ ಧಗನೇ ಹೊತ್ತಿ ಉರಿದ ಕಾರು..!ಮುಂದೇನಾಯ್ತು?

ನ್ಯೂಸ್ ನಾಟೌಟ್ :ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು,ಕಾರು ಸುಟ್ಟು ಕರಕಲಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕುದುರೆಗುಂಡಿಯಲ್ಲಿ ನಡೆದಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆಯನ್ನುವ ಶಂಕೆ ವ್ಯಕ್ತವಾಗಿದೆ. ಸದ್ಯ ಕಾರು ಹೊತ್ತಿ ಉರಿಯುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಮೂವರು ಕಾರಿನಲ್ಲಿ ಪ್ರಯಾಣಿಸುತ್ತಿರುವಾಗಲೇ ಬೆಂಕಿ ಧಗಧಗನೇ ಹೊತ್ತಿ ಉರಿದಿದೆ.

ಬೆಂಕಿ‌ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಿಂದ ಇಳಿದು ಮೂವರು ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಕೂಡಲೇ ಸ್ಥಲೀಯರು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು.ಬಕೆಟ್ ನಿಂದ ನೀರು ಸುರಿದು ನಂದಿಸಲು ಪ್ರಯತ್ನ ಪಟ್ಟಿದ್ದು, ಕೊನೆಗೂ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

ಬೆಂಕಿಯ ತೀವ್ರತೆಯಿಂದ ಕಾರು ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Related posts

ಮಸೀದಿ ಬಳಿ ಕೇಸರಿ ಧ್ವಜ ಕಟ್ಟಿದ್ದಕ್ಕೆ ಹಲ್ಲೆ ನಡೆಸಿದರಾ..? ಆ ರಾತ್ರಿ ರಾಷ್ಟ್ರೀಯ ಹೆದ್ದಾರಿಯ ಬಳಿ ನಡೆದದ್ದೇನು?

ಚಿಕ್ಕಮಗಳೂರು-ಉಡುಪಿ ಜಿಲ್ಲೆಯಗಳಲ್ಲಿ ನಕ್ಸಲರ ಓಡಾಟ..! ಗ್ರಾಮಸ್ಥರೊಂದಿಗೆ ಸಭೆ ನಡೆಸಿರುವ ಶಂಕೆ..!

ರಸ್ತೆ ಕಾಮಗಾರಿ ವೇಳೆ ಏಕಾಏಕಿ ಕುಸಿದು ಬಿದ್ದ ಮಣ್ಣು..!ಮಣ್ಣಿನಡಿ ಸಿಲುಕಿದ ನಾಲ್ವರು ಕಾರ್ಮಿಕರು,ಓರ್ವ ದುರಂತ ಅಂತ್ಯ