ಕ್ರೈಂರಾಜ್ಯ

ರಸ್ತೆ ಬದಿಯಲ್ಲಿದ್ದ ಕಾರಿನ ಮೇಲೆ ಉರುಳಿಬಿದ್ದ ಟೊಮ್ಯಾಟೊ ಸಾಗಿಸುತ್ತಿದ್ದ ಲಾರಿ..! ಅವಘಡದ ರಭಸಕ್ಕೆ ಅಪ್ಪಚ್ಚಿಯಾದ ಕಾರು, ಮೂವರ ಸಾವು

166

ನ್ಯೂಸ್‌ ನಾಟೌಟ್‌: ಕಾರಿನ ಮೇಲೆ ಟೊಮ್ಯಾಟೊ ಸಾಗಿಸುತ್ತಿದ್ದ ಲಾರಿಯೊಂದು ಉರುಳಿ ಬಿದ್ದು ಕಾರಿನಲ್ಲಿದ್ದ ಮೂವರು ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದೆ.

ತಿರುಪತಿ ತಿಮ್ಮಪ್ಪನ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಚಿತ್ತೂರು ತಿರುಪತಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ. ಕಾರು ಚಾಲಕ ರಮೇಶ್, ಮಂಜುನಾಥ್, ಮುನಿವೆಂಕಟರೆಡ್ಡಿ ಮೃತ ದುರ್ದೈವಿಗಳು. ರಸ್ತೆ ಬದಿಯಲ್ಲಿದ್ದ ಕಾರಿನ ಮೇಲೆ ಲಾರಿ ಉರುಳಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಚಿಕ್ಕಬಳ್ಳಾಪುರ ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ತೇಜಸ್ ಎಂಬುವವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಲಾರಿ ಬಿದ್ದ ರಭಸಕ್ಕೆ ತೇಜಸ್‌ಗೂ ಗಾಯವಾಗಿದ್ದು, ಚಿಕ್ಕಬಳ್ಳಾಪುರದ ಜೀವನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯಿಂದಾಗಿ ಕೆಲಕಾಲ ಸಂಚಾರ ವ್ಯತ್ಯಯವಾಗಿದ್ದು, ಪ್ರಕರಣ ಸಂಬಂಧ ದೂರು ದಾಖಲಾಗಿದೆ.

See also  ಅಡಿಕೆ ತೋಟಗಳಿಗೆ ನುಗ್ಗಿದ ನೇತ್ರಾವತಿ ನದಿ ನೀರು..! 6 ಕುಟುಂಬಗಳ ಸ್ಥಳಾಂತರ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget