ಕ್ರೈಂಪುತ್ತೂರು

ಸಂಪ್ಯದಲ್ಲಿ ಅಡ್ಡಾದಿಡ್ಡಿಯಾಗಿ ಚಲಾಯಿಸಿದ ಲಾರಿ ರಿಕ್ಷಾಕ್ಕೆ ಡಿಕ್ಕಿ

328

ನ್ಯೂಸ್‌ನಾಟೌಟ್‌: ಮದ್ಯಪಾನ ಮಾಡಿ ಅಡ್ಡಾದಿಡ್ಡಿಯಾಗಿ ಚಲಾಯಿಸುತ್ತಿದ್ದ ತಮಿಳುನಾಡು ನೋಂದಣಿಯ ಲಾರಿಯೊಂದು ರಸ್ತೆ ಬದಿ ನಿಲ್ಲಿಸಿದ ಆಪೆ ರಿಕ್ಷಾವೊಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ ಘಟನೆ ಭಾನುವಾರ ರಾತ್ರಿ ಆರ್ಯಾಪು ಗ್ರಾಮದ ಸಂಪ್ಯದಲ್ಲಿ ನಡೆದಿದೆ. ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ತಕ್ಷಣ ಎಚ್ಚೆತ್ತ ಸ್ಥಳೀಯರು ಲಾರಿಯನ್ನು ಹಿಂಬಾಲಿಸಿ ತಡೆದು ರಸ್ತೆ ಬದಿ ನಿಲ್ಲಿಸಿ ಚಾಲಕನನ್ನು ತರಾಟೆಗೆ ತೆಗೆದುಗೊಂಡಿದ್ದಾರೆ. ಮದ್ಯಪಾನ ಮಾಡಿದ ಕಾರಣ ಬೇರೆ ಯಾವುದೇ ವಾಹನಕ್ಕೆ ಡಿಕ್ಕಿ ಹೊಡೆಯುವ ಸಾಧ್ಯತೆಯಿರುವ ಕಾರಣ ವಾಹನ ಚಲಾಯಿಸದಂತೆ ಚಾಲಕನಿಗೆ ಸ್ಥಳೀಯರು ತಾಕೀತು ಮಾಡಿದರು. ಬಳಿಕ ಸಂಪ್ಯ ಠಾಣಾ ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಲಾರಿ ಚಾಲಕನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

See also  ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ, ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಐವರು ಶಂಕಿತ ಉಗ್ರರ ಬಂಧನ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget