ನ್ಯೂಸ್ ನಾಟೌಟ್: ತೆಂಗಿನ ಮರದಿಂದ ಶೇಂದಿ ತೆಗೆಯುತ್ತಿದ್ದಾಗ ವ್ಯಕ್ತಿಯೊಬ್ಬರು ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ (ಎ.11) ಮಂಗಳೂರು ಉಳ್ಳಾಲದ ಕೊಕ್ಯ ಸಮೀಪದ ಕನೀರುತೋಟ ಎಂಬಲ್ಲಿ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಬಲ್ಯ ನಡುಪೊಲಿಕೆ ನಿವಾಸಿ ಯಶೋಧರ್ (46) ಎಂದು ಗುರುತಿಸಲಾಗಿದೆ. ಯಶೋಧರ್ ಅವರು ಶುಕ್ರವಾರ ಬೆಳಗ್ಗೆ ತನ್ನ ಮನೆ ಸಮೀಪದ ತೋಟವೊಂದರ ಬಳಿ ಮೂರ್ತೆದಾರಿಕೆ ನಡೆಸುತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಮನೆಯ ಆಧಾರಸ್ತಂಭವಾಗಿದ್ದ ಯಶೋಧರ್ ಇದೀಗ ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಹಲವು ವರುಷಗಳಿಂದ ಮೂರ್ತೆದಾರಿಕೆ ನಡೆಸುತ್ತಿದ್ದ ಯಶೋಧರ್ ಅವರು ಈ ಹಿಂದೊಮ್ಮೆ ಲೋ ಬಿಪಿಯಿಂದ ಪ್ರಜ್ಞೆ ತಪ್ಪಿಬಿದ್ದಿದ್ದರು. ಈಗಲೂ ಅದೇ ಕಾರಣದಿಂದ ತೆಂಗಿನ ಮರದಿಂದ ಬಿದ್ದಿರುವುದಾಗಿ ಶಂಕೆ ವ್ಯಕ್ತವಾಗಿದೆ.