ಕರಾವಳಿಕೊಡಗು

ಬಬ್ಬು ಸ್ವಾಮಿ ದೈವಸ್ಥಾನದಲ್ಲಿ ಮಡಿಕೇರಿಯ ವ್ಯಕ್ತಿ ಆತ್ಮಹತ್ಯೆ..! ದೈವ ಮುನಿಯಿತೇ..? ಈ ನಿಗೂಢ ಸಾವಿನ ರಹಸ್ಯವೇನು?

272

ನ್ಯೂಸ್ ನಾಟೌಟ್: ಮಡಿಕೇರಿ ಮೂಲದ ವ್ಯಕ್ತಿಯೊಬ್ಬರು ಮಂಗಳೂರು ನಗರ ಹೊರವಲಯದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಬ್ಬು ಸ್ವಾಮಿ ದೈವಸ್ಥಾನದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಮೃತರನ್ನು ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಗೋಪಾಲ (64) ಎಂದು ಪೊಲೀಸರು ತಿಳಿಸಿದ್ದಾರೆ.ಗೋಪಾಲ ಎಂಬಾತ ಮಡಿಕೇರಿಯಿಂದ ಸೋಮವಾರ ತಣ್ಣೀರು ಬಾವಿ ಬೀಚ್ ಗೆ ಬಂದಿದ್ದು, ಬಳಿಕ ದೈವಸ್ಥಾನದ ಪ್ರಾಂಗಣದಲ್ಲಿ ನೈಲಾನ್ ಹಗ್ಗದಿಂದ ಕುತ್ತಿಗೆಗೆ ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಘಟನೆಗೆ ಸಂಬಂಧ ಪಣಂಬೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ತನಿಖೆ ನಡೆಯುತ್ತಿದ್ದು ಸಾವಿನ ಹಿಂದಿನ ರಹಸ್ಯ ಇನ್ನಷ್ಟೇ ತಿಳಿಯಬೇಕಿದೆ.

See also  350 ವರ್ಷಗಳ ಬಳಿಕ ಛತ್ರಪತಿ ಶಿವಾಜಿಯ 'ಹುಲಿ ಉಗುರು' ಮರಳಿ ಭಾರತಕ್ಕೆ..! ಈ ಬಗ್ಗೆ ಅಸಲಿ - ನಕಲಿ ಎಂಬ ಚರ್ಚೆಯಾಗುತ್ತಿರುವುದೇಕೆ..? ಇಲ್ಲಿದೆ ಸಂಪೂರ್ಣ ಮಾಹಿತಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget