ನ್ಯೂಸ್ ನಾಟೌಟ್: ನಾಯಿಯನ್ನು ಬೈಕಿನ ಹಿಂಬದಿಗೆ ಚೈನಿನಿಂದ ಕಟ್ಟಿ ಎಳೆದೊಯ್ದ ಅಮಾನವೀಯ ಘಟನೆ ಬೈಂದೂರು ತಾಲೂಕಿನಲ್ಲಿ ನಡೆದಿದೆ. ಈ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ತನ್ನ ಸಾಕು ನಾಯಿಯನ್ನೇ ಬೈಕಿಗೆ ಸರಪಣಿಯಿಂದ ಕಟ್ಟಿ ವ್ಯಕ್ತಿ ಎಳೆದೊಯ್ದಿದ್ದು,ಸಾರ್ವಜನಿಕರು ನಾಯಿ ಮಾಲೀಕನನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಇಂತಹ ಘಟನೆಗಳು ಮತ್ತೆ ಮರುಕಳಿಸಬಾರದು , ಈತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಘಟನೆಯ ಬಗ್ಗೆ ಬೈಂದೂರು ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ.
View this post on Instagram