ಕರಾವಳಿಕೊಡಗು

ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿ ಅರೆಸ್ಟ್‌, ಕಣ್ಣಾಮುಚ್ಚಾಲೆ ಆಡುತ್ತಿದ್ದವನ ಹೆಡೆಮುರಿ ಕಟ್ಟಿದ ಬೆಳ್ತಂಗಡಿ ಪೊಲೀಸರು..!

ನ್ಯೂಸ್ ನಾಟೌಟ್‌ : ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಸತೀಶ್ ದ್ರಾವಿಡ ಎಂಬಾತ ಕಳೆದ ಕೆಲವು ಸಮಯಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಣ್ಣಾಮುಚ್ಚಾಲೆ ಆಡುತ್ತಿದ್ದ. ಈತನಿಗಾಗಿ ಪೊಲೀಸರು ಎಲ್ಲ ಕಡೆ ಬಲೆ ಬೀಸಿದ್ದರು. ಆದರೆ ಈತನ ಸುಳಿವು ಸಿಕ್ಕಿರಲಿಲ್ಲ. ಇದೀಗ ಜೂ.15 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ಸಕ೯ಲ್ ಇನ್ಸ್‌ ಪೆಕ್ಟರ್‌ ಶಿವಕುಮಾರ್ ನೇತೃತ್ವದಲ್ಲಿ ಹೆಚ್.ಸಿ ವೃಷಭ ಹಾಗೂ ಪಿ.ಸಿ ಬಸವರಾಜ್ ರವರು ಬಂಟ್ವಾಳದಿಂದ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ವರದಿಯಾಗಿದೆ.

Related posts

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ: ಗಂಭೀರ ಗಾಯಗೊಂಡ ಗಾಯಾಳು ಮಂಗಳೂರು ಆಸ್ಪತ್ರೆಗೆ ಶಿಫ್ಟ್‌

ಸರ್ಕಾರಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ! ಸ್ಥಳದಲ್ಲೇ ಮೃತಪಟ್ಟ ತಾಯಿ-ಮಗ ..!

ಸುಳ್ಯ ವಿಧಾನಸಭಾ ಕ್ಷೇತ್ರದ ಗಡಿಯಲ್ಲಿ 6 ಚೆಕ್‌ ಪೋಸ್ಟ್ ಸ್ಥಾಪನೆ! ದಕ್ಷಿಣ ಕನ್ನಡ- ಕೊಡಗು ಗಡಿಗಳಲ್ಲೂ ತಪಾಸಣೆ ಜೋರು!