ಕೊಡಗುರಾಜಕೀಯ

ವಿರಾಜಪೇಟೆ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್. ಪೊನ್ನಣ್ಣ ನಾಮಪತ್ರ ಸಲ್ಲಿಕೆ

351

ನ್ಯೂಸ್ ನಾಟೌಟ್ : ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್. ಪೊನ್ನಣ್ಣ ಅವರು ಮಂಗಳವಾರ ವಿರಾಜಪೇಟೆಯಲ್ಲಿ ಚುನಾವಣಾಧಿಕಾರಿ ಶಬನಾ ಎಂ. ಶೇಕ್ ಅವರಿಗೆ ನಾಮಪತ್ರ ಸಲ್ಲಿಸಿದರು.

ನಂತರ ಮಾಧ್ಯಮದ ಜತೆ ಮಾತನಾಡಿ, ಈ ಬಾರಿಯೂ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದರು. ನಾಮಪತ್ರ ಸಲ್ಲಿಸುವ ಮೊದಲು ತಲಕಾವೇರಿ ಕ್ಷೇತ್ರಕ್ಕೆ ಹೋಗಿ ದೇವರ ದರ್ಶನ ಪಡೆದು ನಂತರ ಸರ್ವೋದಯ ಕಾಲೇಜು ಪಂಜರಪೇಟೆ ಆಗಮಿಸಿದರು. ನಂತರ ಕಾರ್ಯಕರ್ತರು ಮೆರವಣಿಗೆ ನಡೆಸಿ ಪೊನ್ನಣ್ಣ ಪರ ಘೋಷಣೆಗಳನ್ನು ಕೂಗಿದರು. ಈ ವೇಳೆಯಲ್ಲಿ ಪೊನ್ನಣ್ಣ ಅವರ ಪತ್ನಿ ಕಾಂಚನ, ವಿಧಾನ ಪರಿಷತ್ ಮಾಜಿ ಸದಸ್ಯ ವೀಣಾ ಅಚ್ಚಯ್ಯ, ಅರುಣ್ ಮಾಚಯ್ಯ , ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ, ವಿರಾಜಪೇಟೆ , ಪೊನ್ನಂಪೇಟೆ , ನಾಪೋಕ್ಲು ಕಾಂಗ್ರೆಸ್ ಅಧ್ಯಕ್ಷರಾದ ರಂಜಿ ಪೂಣಚ್ಚ, ಮಿದೇರಿರ ನವೀನ್ , ಇಸ್ಮಾಯಿಲ್ , ಸೂರಜ್ ಹೊಸೂರು ಮೊದಲಾದವರು ಪಾಲ್ಗೊಂಡಿದ್ದರು.

See also  ಮಹಿಳಾ ಉದ್ಯಮಿಯ ಬ್ಯಾಗ್ ಕದ್ದು ಎಸ್ಕೇಪ್ ಆದ ಕಳ್ಳನ ಫಿಲ್ಮಿ ಶೈಲಿಯಲ್ಲಿ ಹಿಡಿದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ..! ಕೊಡಗಿನಲ್ಲಿ ನಡೆದ ರೋಚಕ ಘಟನೆ ಹೇಗಿತ್ತು ಗೊತ್ತಾ..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget