ನ್ಯೂಸ್ ನಾಟೌಟ್: ಧರ್ಮಸ್ಥಳ ಗ್ರಾಮದಲ್ಲಿ ಸಾಮೂಹಿಕವಾಗಿ ಶವಗಳನ್ನು ಹೂತು ಹಾಕುತ್ತಿದ್ದೆ ಎಂದು ಅನಾಮಿಕನೊಬ್ಬ ಎಸ್ಐಟಿ ಎದುರು ಹೇಳಿದ ಬಳಿಕ ಇದೀಗ ಮತ್ತೋರ್ವ ಪ್ರತ್ಯಕ್ಷ ಸಾಕ್ಷಿ ಶವ ಹೂತು ಹಾಕಿರುವ ಪ್ರಕರಣದ ಪ್ರತ್ಯಕ್ಷ ಸಾಕ್ಷಿ ಎಂದು ಹೇಳಿಕೊಂಡಿದ್ದಾನೆ. ಈ ವ್ಯಕ್ತಿ ಇನ್ನು ಕೆಲವೇ ಕ್ಷಣಗಳಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಗೆ ತೆರಳಿ ದೂರು ನೀಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಈ ಹಿಂದೆ ಜಯಂತ್ ಟಿ.ಟಿ ಬಾಲಕಿಯೊಬ್ಬಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತ್ಯಕ್ಷ ಸಾಕ್ಷಿ ಎಂದು ಹೇಳಿದ್ದರು. ಮಾತ್ರವಲ್ಲ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಇದೀಗ ಎರಡನೇ ಸಾಕ್ಷಿ ಠಾಣೆಯ ಮೆಟ್ಟಿಲೇರುತ್ತಿರುವುದು ಬಹಳಷ್ಟು ಕುತೂಹಲ ಮೂಡಿಸಿದೆ. ಎಸ್ಐಟಿ ಎದುರು ಪ್ರತ್ಯಕ್ಷ ಸಾಕ್ಷಿ ಎನ್ನುವುದನ್ನು ತಿಳಿಸಿದಾಗ ಅಲ್ಲಿನ ಅಧಿಕಾರಿಗಳು ಠಾಣೆಗೆ ದೂರು ನೀಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.