ಕರಾವಳಿ

ಬೆಳ್ಳಂಬೆಳಗ್ಗೆ ಕರಾವಳಿಯಲ್ಲಿ ಭ್ರಷ್ಟರ ಚಳಿ ಬಿಡಿಸಿದ ಎಸಿಬಿ

576

ನ್ಯೂಸ್ ನಾಟೌಟ್: ರಾಜ್ಯಾದ್ಯಂತ ಇಂದು ಬೆಳ್ಳಂಬೆಳಗ್ಗೆ ಏಕಕಾಲದಲ್ಲಿ 80 ಕಡೆಗಳಲ್ಲಿ ಎಸಿಬಿ ದಾಳಿ ನಡೆಸಿದೆ. 21 ಸರ್ಕಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದೆ. ಕರಾವಳಿಯ ಉಡುಪಿಯಲ್ಲೂ ದಾಳಿ ನಡೆದಿದ್ದು ಸಣ್ಣ ನೀರಾವರಿ ಇಲಾಖೆ ಎ.ಇ ಹರೀಶ್ ನಿವಾಸಕ್ಕೆ ದಾಳಿ ಮಾಡಿದ ಅಧಿಕಾರಿಗಳು ಕೆಜಿಗಟ್ಟಲೆ ಚಿನ್ನ, ನಗದು, ಆದಾಯಕ್ಕೂ ಮೀರಿದ ಅಪಾರ ಪ್ರಮಾಣದ ಆಸ್ತಿಯನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡಿದ್ದಾರೆ.

ದಾಳಿ ವೇಳೆ ಸುಮಾರು ಎರಡು ಕೆಜಿಗೂ ಅಧಿಕ ಚಿನ್ನ, ಸುಮಾರು 5 ಲಕ್ಷ ರೂಪಾಯಿ ನಗದು, ದುಬಾರಿ ಬೆಲೆಯ ವಾಚುಗಳು, ಮೂರು ವಾಹನಗಳು, ಚಿನ್ನದ ತಟ್ಟೆ ಚಿನ್ನದ ತಗಡು, 15ಕ್ಕೂ ಹೆಚ್ಚು ಚಿನ್ನದ ಬಳೆ, 30ಕ್ಕೂ ಹೆಚ್ಚು ಸರ, ನೆಕ್ಲೆಸ್, ಬ್ರಾಸ್ಲೆಟ್ ಸೇರಿ ಅಪಾರ ಪ್ರಮಾಣದ ಚಿನ್ನ ಹಾಗೂ ಆಸ್ತಿ ಪತ್ರ ದಾಖಲೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

See also  ಪುತ್ತೂರು: ಒಂದೇ ದಿನ ನಾಲ್ಕು ಕಡೆ ಅಗ್ನಿ ಅವಘಡ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget