ಕರಾವಳಿಕ್ರೈಂ

ಮಂಗಳೂರು: ಸರಣಿ ಅಪಘಾತ ! ಆಕ್ಸಿಲರೇಟರ್ ಪೆಡಲ್ ಮಧ್ಯೆ ಸಿಕ್ಕಿಕೊಂಡ ಚಪ್ಪಲಿ!

ನ್ಯೂಸ್ ನಾಟೌಟ್: ಮಂಗಳೂರಿನ ಕೋರ್ಟ್ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಕಾರನ್ನು ರಿವರ್ಸ್ ತೆಗೆಯುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಆಟೋ ಹಾಗೂ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಘಟನೆ ಮಂಗಳವಾರ ಮಾರ್ಚ್ 21 ರಂದು ವರದಿಯಾಗಿದೆ.

ಕಾರೊಂದು ರಿವರ್ಸ್ ತೆಗೆಯುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಮತ್ತು ಬೇರೊಂದು ಕಾರಿಗೆ ಡಿಕ್ಕಿ ಹೊಡೆದು ರಸ್ತೆ ಪಕ್ಕ ಪಲ್ಟಿಯಾಗಿದೆ. ಈ ಘಟನೆಯಲ್ಲಿ ಚಾಲಕನಿಗೆ ಅಲ್ಪ ಸ್ವಲ್ಪ ಗಾಯಗಳಾಗಿವೆ ಮತ್ತು ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ ಎಂದು ವರದಿ ತಿಳಿಸಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ ಇಳಿಜಾರಿನಲ್ಲಿ ರಿವರ್ಸ್ ತೆಗೆಯುವ ಸಂದರ್ಭ ಚಾಲಕನ ಚಪ್ಪಲಿ ಆಕ್ಸಿಲರೇಟರ್ ಪೆಡಲ್ ಮಧ್ಯೆ ಸಿಕ್ಕಿಹಾಕಿಕೊಂಡು ಕಾರಿನ ವೇಗ ಹೆಚ್ಚಾಗಿ ಈ ಸರಣಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಕಾರು ತೆರವು ಮಾಡಲು ಕ್ರಮ ಕೈಗೊಳ್ಳಲಾಗಿದೆ. ಹಾಗೆಯೇ ಅಪಘಾತ ಸ್ಥಳದಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಮೂಲಗಳು ತಿಳಿಸಿವೆ.

Related posts

ಮುಲ್ಕಿ: ಮನೆಗೆ ನುಗ್ಗಿ ಕಳ್ಳತನ ಮಾಡಿದ್ದ ಕಳ್ಳನ ಬಂಧನ, ಸಿಸಿಬಿ ಪೊಲೀಸರ ಮಿಂಚಿನ ಕಾರ್ಯಾಚರಣೆ

ಮಂಗಳೂರು ಲಾಡ್ಜ್‌ನಲ್ಲಿ ಕೇರಳದ ದಂಪತಿಯ ಮೃತದೇಹ ಪತ್ತೆ

“ಸೌಜನ್ಯಳನ್ನು ಅತ್ಯಾಚಾರ ಮಾಡಿ ಕೊಂದ ಪಾಪಿಗಳನ್ನು ನ್ಯಾಯದ ಕಟಕಟೆಗೆ ತಂದು ನಿಲ್ಲಿಸುವುದೇ ನಮ್ಮ ಉದ್ದೇಶ”: ಸ್ಟಾಲಿನ್