ಕರಾವಳಿಕ್ರೈಂ

ನೆಲ್ಯಾಡಿ: ಭೀಕರ ಅಪಘಾತಕ್ಕೆ ಮಹಿಳೆ ಸಾವು, ಪತಿ, ಪುತ್ರ ಗಂಭೀರ!

248

ನ್ಯೂಸ್ ನಾಟೌಟ್: ಗುರುವಾರ ಬೆಳ್ಳಂಬೆಳಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆ ಮೃತಪಟ್ಟು ಪತಿ ಮತ್ತು ಪುತ್ರ ಗಂಭೀರ ಗಾಯಗೊಂಡ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಕರ್ಬಸಂಕ ಎಂಬಲ್ಲಿ ನಡೆದಿದೆ.

ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರೊಂದು ನೆಲ್ಯಾಡಿ ಜ್ಞಾನೋದಯ ಬೆಥನಿ ಕಾಲೇಜು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಚಲಾಯಿಸುತ್ತಿದ್ದ ಪುತ್ರ ಅಶ್ವಿನ್ ಹಾಗೂ ಪತಿ ಗಂಭೀರ ಗಾಯಗೊಂಡು ನೆಲ್ಯಾಡಿಯ ಅಶ್ವಿನಿ ಆಂಬುಲೆನ್ಸ್‌ನಲ್ಲಿ ಮಂಗಳೂರು ಆಸ್ಪತ್ರೆಗೆ ಕರೆದೂಯ್ಯಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸ್ ಠಾಣೆ ವೃತ್ತ ನಿರೀಕ್ಷಕ ರವಿ ಬಿ.ಎಸ್, ಸಬ್ ಇನ್‌ಸ್ಪೆಕ್ಟರ್ ರಾಜೇಶ್ ಕೆ.ವಿ, ನೆಲ್ಯಾಡಿ ಹೊರ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌ ಬಾಲಕೃಷ್ಣ, ಕುಶಾಲಪ್ಪ ನಾಯ್ಕ ಭೇಟಿ ನೀಡಿ ಪರಿಶೀಲಿಸಿದ್ದಾರೆ.

See also  ಸುಳ್ಯ: ಮಲಗಿದ ಸ್ಥಿತಿಯಲ್ಲಿಯೇ ವ್ಯಕ್ತಿ ಮೃತ್ಯು
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget