ಕ್ರೈಂ

ಭೀಕರ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು

ನ್ಯೂಸ್ ನಾಟೌಟ್:  ಬೈಕ್ ಮತ್ತು ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಅಳದಂಗಡಿ ಸಮೀಪ ಪಿಲ್ಯ ಮಸೀದಿ ಎದುರು ಸೆ.15ರ ರಾತ್ರಿ ನಡೆದಿದೆ.

ಮೃತಪಟ್ಟ ಬೈಕ್ ಸವಾರನನ್ನು ಕುದ್ಯಾಡಿ ನಿವಾಸಿ ಪ್ರವೀಣ್ ಆಚಾರ್ಯ ಎಂದು ಗುರುತಿಸಲಾಗಿದೆ. ಈಚರ್ ಲಾರಿ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದು ಕಟ್ಟೆ ಬಳಿ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ತಡೆದು ನಿಲ್ಲಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಮೃತ ಪ್ರವೀಣ್ ಆಚಾರ್ಯ ಅವರ ಪಾರ್ಥಿವ ಶರೀರವನ್ನು ಬೆಳ್ತಂಗಡಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ವೇಣೂರು ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೊಂಡಿದ್ದಾರೆ.

Related posts

ಕರ್ನಾಟಕದ ಐಪಿಎಸ್ ಅಧಿಕಾರಿ ತಮಿಳ್ ನಾಡಲ್ಲಿ ಅರೆಸ್ಟ್ ಆಗಿದ್ದೇಕೆ..? ಇಲ್ಲಿದೆ ಪೊಲೀಸರ ನಡುವಿನ ಹೊಡೆದಾಟದ ಕಥೆ..!

ಸುಳ್ಯ: ಮರಳು ಲಾರಿಯನ್ನು ವಶಕ್ಕೆ ಪಡೆದ ಪೊಲೀಸರು, ಲಾರಿ ಬಿಟ್ಟು ಪರಾರಿಯಾದ ಚಾಲಕ, ಪೊಲೀಸರು ಹೇಳಿದ್ದೇನು..?

ವಯನಾಡು ಭೂ ಕುಸಿತ: ಮೃತರ ಸಂಖ್ಯೆ 300ಕ್ಕೆ ಏರಿಕೆ..! ದುರಂತ ಸ್ಥಳಕ್ಕೆ ರಾಹುಲ್ ಗಾಂಧಿ,ಪ್ರಿಯಾಂಕಾ ಗಾಂಧಿ ಭೇಟಿ..!