ಬೆಂಗಳೂರು: ಉದ್ಯಾನನಗರಿಯಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಇತ್ತೀಚೆಗೆ ಹೊಸೂರು ಶಾಸಕನ ಪುತ್ರ ಸೇರಿದಂತೆ ಏಳು ಮಂದಿ ಅಪಘಾತದಲ್ಲಿ ಸಾವಿಗೀಡಾದ ಘಟನೆ ಮಾಸುವ ಮೊದಲೇ ಗುರುವಾರ ಬೆಳ್ಳಂ ಬೆಳಗ್ಗೆ ಮತ್ತೊಂದು ಅಪಘಾತ ಸಂಭವಿಸಿದೆ. ಬೆಂಗಳೂರಿನ ಹೊಸೂರು ರಸ್ತೆ ಅತ್ತಿಬೆಲೆ ಸಮೀಪದ ನೆರಳೂರು ಎಂಬಲ್ಲಿ ಚಲಿಸುತ್ತಿದ್ದ ಲಾರಿಗೆ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.