ನೆಲ್ಯಾಡಿ: ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲರ್ ವೊಂದು ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಶಿರಾಡಿ ಎಂಬಲ್ಲಿ ಕಮರಿಗೆ ಉರುಳಿ ಬಿದ್ದ ಘಟನೆ ಇಂದು ಬೆಳ್ಳಂಬೆಳಗ್ಗೆ ನಡೆದಿದೆ. ಅಪಘಾತದಲ್ಲಿ ಐವರು ಗಾಯಗೊಂಡಿದ್ದಾರೆ. ನಿದ್ದೆಯ ಮಂಪರಿನಲ್ಲಿ ಚಾಲಕ ಗಾಡಿ ಓಡಿಸಿದ್ದರಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.