ಉಪ್ಪಿನಂಗಡಿ: ತಾಯಿ-ಮಗುವಿನ ಮೇಲೆ ಬಸ್ ಹರಿದು ಇಬ್ಬರು ಸ್ಥಳದಲ್ಲೇ ಸಾವಿಗೀಡಾದ ಹೃದಯವಿದ್ರಾವಕ ಘಟನೆ ಉಪ್ಪಿನಂಗಡಿಯ ಬಸ್ ನಿಲ್ದಾಣದಲ್ಲಿ ಇಂದು ಬೆಳಗ್ಗೆ 11.30 ಕ್ಕೆ ನಡೆದಿದೆ. ತಾಯಿ ತನ್ನ ಮಗುವನ್ನು ಹಿಡಿದು ಬಸ್‌ಗಾಗಿ ಕಾಯುತ್ತ ನಿಂತಿದ್ದ ಸಂದರ್ಭದಲ್ಲಿ ಬಸ್ ಚಾಲಕನ ಅಜಾಗರೂಕತೆಯಿಂದ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಶಿರ್ಲಾಲು ನಿವಾಸಿಗಳಾದ 1 ವರ್ಷದ ಮಗು ಶಾಹೀನ್ ಹಾಗೂ 25 ವರ್ಷದ ಮಹಿಳೆ ಶಾಹಿದಾ ಮೃತಪಟ್ಟಿದ್ದಾರೆ. ಸ್ಥಳದಲ್ಲಿ ನೂರಾರು ಜನರು ನೆರೆದಿದ್ದಾರೆ. ಈ ವೇಳೆ ಆಕ್ರೋಶಗೊಂಡ ಜನರು ಚಾಲಕನನ್ನು ಹಿಡಿದು ಚೆನ್ನಾಗಿ ಥಳಿಸಿದ್ದಾರೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಆಗಮಿಸಿದ್ದು ತನಿಖೆ ನಡೆಸುತ್ತಿದ್ದಾರೆ.