ಕರಾವಳಿಕ್ರೈಂಬೆಂಗಳೂರು

ಹಾಡಹಗಲೇ ಯುವಕನ ಮೇಲೆ ಆ್ಯಸಿಡ್ ದಾಳಿ..! ಒಂದೇ ಠಾಣಾವ್ಯಾಪ್ತಿಯಲ್ಲಿ ಇದು 2ನೇ ಪ್ರಕರಣ..!

200

ನ್ಯೂಸ್ ನಾಟೌಟ್: ಬೆಂಗಳೂರಿನಲ್ಲಿ ಯುವನಕನೊಬ್ಬನ ಮೇಲೆ ಆ್ಯಸಿಡ್ ದಾಳಿ ನಡೆದಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸೆ.21ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ನಾಗೇಶ್ ಕೊಂಡ ಎಂಬ ಯುವಕನ ಮೇಲೆ ದುಷ್ಕರ್ಮಿಗಳು ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಗಾಯಾಳು ಯುವಕನಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಈ ನಡುವೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಗಾಯಾಳು ಹೇಳಿಕೆ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಇದು ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ 2ನೇ ದಾಳಿಯಾಗಿದೆ. 2022ರಲ್ಲಿ ಹಾಡಹಗಲೇ ಯುವತಿ ಮೇಲೆ ಆ್ಯಸಿಡ್​ ದಾಳಿ ನಡೆದಿತ್ತು.

ಆರೋಪಿ ನಾಗ ಯುವತಿ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದ. ಯುವತಿ ಮೇಲಿನ ಆ್ಯಸಿಡ್ ದಾಳಿ ಪ್ರಕರಣ ರಾಜ್ಯಾದ್ಯಂತ ಭಾರಿ ಚರ್ಚೆ ಆಗಿತ್ತು. ಆರೋಪಿಯನ್ನು ಬಂಧಿಸುವಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರು ಯಶಸ್ವಿಯಾಗಿದ್ದರು. ಇದೇ ಠಾಣಾ ವ್ಯಾಪ್ತಿಯಲ್ಲಿ ಮತ್ತೊಂದು ಆ್ಯಸಿಡ್​ ದಾಳಿ ನಡೆದಿರುವುದು ಜನರು ಮತ್ತಷ್ಟು ಆತಂಕಗೊಳಿಸಿದೆ.

Click

https://newsnotout.com/2024/09/darshan-thugudeepa-kannada-news-actor-bail-appeal-in-court-kannada/
https://newsnotout.com/2024/09/6-year-old-baby-trapped-by-man-saved-by-monkey-kannada-news/
See also  ಕಬಡ್ಡಿ ಪಂದ್ಯದ ವೇಳೆ ವೀಕ್ಷಕರ ಗ್ಯಾಲರಿ ಕುಸಿದು ಓರ್ವ ಸಾವು..! ಹಲವರು ಆಸ್ಪತ್ರೆಗೆ ದಾಖಲು
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget