ನ್ಯೂಸ್ ನಾಟೌಟ್: ರೇಣುಕಾಸ್ವಾಮಿ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ ಜಾಮೀನಿನ ಮೇಲೆ ಹೊರಗಿದ್ದಾರೆ. ಜಾಮೀನು ನೀಡುವಾಗ ವಿದೇಶಕ್ಕೆ ತೆರಳುವಂತಿಲ್ಲ ಎನ್ನವು ಷರತ್ತನ್ನು ಕೋರ್ಟ್ ವಿಧಿಸಿತ್ತು. ಹಾಗೂ ತೆರಳಬೇಕು ಎಂದರೆ ವಿಶೇಷ ಅನುಮತಿ ಅಗತ್ಯ ಎಂದು ಕೋರ್ಟ್ ಷರತ್ತನ್ನು ವಿಧಿಸಿತ್ತು. ಈಗ ದರ್ಶನ್ ವಿದೇಶಕ್ಕೆ ತೆರಳಲು ಅನುಮತಿ ಕೋರಿ 57ನೇ ಸಿಸಿಹೆಚ್ ಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಕೋರ್ಟ್ ಇದರಲ್ಲಿ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ದರ್ಶನ್ ಬೆಂಗಳೂರು ಬಿಟ್ಟು ತೆರಳುವಂತಿಲ್ಲ ಎನ್ನುವ ಸೂಚನೆಯನ್ನು ನ್ಯಾಯಾಲಯವು ನೀಡಿತ್ತು. ಆದರೆ, ಹೈಕೋರ್ಟ್ನಿಂದ ದೇಶ ಸುತ್ತಾಟ ಮಾಡಲು ದರ್ಶನ್ ಅನುಮತಿ ಪಡೆದಿದ್ದರು. ರಾಜಸ್ಥಾನ ಮೊದಲಾದ ಕಡೆಗಳಲ್ಲಿ ‘ಡೆವಿಲ್’ ಸಿನಿಮಾ ಶೂಟ್ ಮುಗಿಸಿ ದರ್ಶನ್ ಮರಳಿದ್ದರು. ಈಗ ವಿದೇಶಕ್ಕೆ ಹಾರಲು ಆರೋಪಿ ದರ್ಶನ್ ಸಿದ್ಧತೆ ಮಾಡಿಕೊಂಡಿದ್ದಾರೆ.
ದರ್ಶನ್ ಮಿಲನ ಪ್ರಕಾಶ್ ನಿರ್ದೇಶನದ ‘ಡೆವಿಲ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಹಾಡಿನ ಶೂಟ್ ಗಾಗಿ ವಿದೇಶಕ್ಕೆ ತೆರಳಬೇಕಿದೆ. ಹೀಗಾಗಿ, ಸಿನಿಮಾ ಶೂಟಿಂಗ್ ಗಾಗಿ ದುಬೈ ಮತ್ತು ಯೂರೋಪ್ ಗೆ ತೆರಳಲು ಅವಕಾಶ ಕೋರಿ ಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆ ಆಗಿದೆ. 25 ದಿನಗಳ ಕಾಲ ವಿದೇಶಕ್ಕೆ ತೆರಳಲು ಅವಕಾಶ ಕೋರಲಾಗಿದೆ ಎಂದು ವರದಿ ತಿಳಿಸಿದೆ. ಕೋರ್ಟ್ನಲ್ಲಿ ದರ್ಶನ್ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು (ಮೇ 28) ನಡೆಯಲಿದೆ.
ಬಂಟ್ವಾಳ: ಅಬ್ದುಲ್ ರಹೀಂ ಹತ್ಯೆ ಪ್ರಕರಣದಲ್ಲಿ 15 ಮಂದಿ ವಿರುದ್ಧ ಎಫ್.ಐ.ಆರ್..! ಇಲ್ಲಿದೆ ಸಂಪೂರ್ಣ ಮಾಹಿತಿ