ಕ್ರೈಂವೈರಲ್ ನ್ಯೂಸ್ಸಿನಿಮಾ

ನಟ ದರ್ಶನ್‌ ಗೆ ಐಟಿ ಅಧಿಕಾರಿಗಳಿಂದ ವಿಚಾರಣೆ..! ಸತತ 7 ಗಂಟೆಗಳ ಕಾಲ ಜೈಲಿನೊಳಗೆ ಪ್ರಶ್ನೆಗಳ ಸುರಿಮಳೆ..!

230

ನ್ಯೂಸ್ ನಾಟೌಟ್ : ರೇಣುಕಾಸ್ವಾಮಿ ಪ್ರಕರಣದಲ್ಲಿ ಹರಿದಾಡಿದ ಹಣದ ಬಗ್ಗೆ ನಟ ದರ್ಶನ್‌ ಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ನಿನ್ನೆ(ಸೆ.26) ತೀವ್ರ ವಿಚಾರಣೆ ನಡೆಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಬಳಿಕ ಶವ ವಿಲೇವಾರಿ, ಸಾಕ್ಷ್ಯ ನಾಶಕ್ಕಾಗಿ ದರ್ಶನ್ ಲಕ್ಷ ಲಕ್ಷ ಕಾಸು ನೀಡುವ ಭರವಸೆ ನೀಡಿದ್ದರು. ಈ ಸಂಬಂಧ ಆದಾಯ ತೆರಿಗೆ ಅಧಿಕಾರಿಗಳು ಬಳ್ಳಾರಿ ಜೈಲಿನಲ್ಲೇ ಇಂದು ದರ್ಶನ್‌ರನ್ನು 7 ಗಂಟೆ ಕಾಲ ವಿಚಾರಣೆಗೆ ಒಳಪಡಿಸಿದರು.

ರೇಣುಕಾಸ್ವಾಮಿ ಕೊಲೆ ಆದ ಬಳಿಕ ಮನೆಯಲ್ಲಿ ಅಷ್ಟೊಂದು ಹಣ ಹೇಗೆ ಬಂತು? ಆ ಹಣ ಯಾರಿಗೆ ಸೇರಿದ್ದು? ಆ ಹಣವನ್ನು ನಿಮಗೆ ತಂದುಕೊಟ್ಟಿದ್ಯಾರು? ಹೀಗೆ ಹತ್ತು ಹಲವು ಪ್ರಶ್ನೆಗಳನ್ನು ಐಟಿ ಅಧಿಕಾರಿಗಳು ದರ್ಶನ್‌ಗೆ ಕೇಳಿದ್ದಾರೆ.

ಐಟಿ ಅಧಿಕಾರಿಗಳು ದರ್ಶನ್‌ ಅವರನ್ನು ವಿಚಾರಣೆ ಒಳಪಡಿಸುತ್ತಾರೆ ಎನ್ನುವ ವಿಚಾರ ತಿಳಿಯುತ್ತಿದ್ದಂತೆ ದರ್ಶನ್ ಪರ ಅಡಿಟರ್ ಎಂ ಎಸ್ ರಾವ್ ಮತ್ತು ಅಸಿಸ್ಟೆಂಟ್ ಅರುಣ್ ಇಬ್ಬರು ಬೆಳಿಗ್ಗೆ 10:50 ಕ್ಕೆ ಜೈಲಿಗೆ ಬಂದಿದ್ದರು.

Click

https://newsnotout.com/2024/09/temple-for-actor-puneeth-rajkumar-and-ashwini-innaguarated/
See also  ಸುಳ್ಯದ ಐಸ್ ಕ್ಯಾಂಡಿ ಬಾಯ್ ಇನ್ನಿಲ್ಲ, ಹಠಾತ್ ಇಹಲೋಕ ತ್ಯಜಿಸಿದ ಮನೆಮನೆಗೆ ಸೈಕಲ್ ಏರಿ ಐಸ್ ಕ್ರೀಂ ಹಾಕುತ್ತಿದ್ದ ಯುವಕ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget