Latestಸಿನಿಮಾ

ಕಿಚ್ಚ ಸುದೀಪ್ ಸಹಾಯ ಬೆನ್ನಲ್ಲೇ ‘ಚಿರಂಜೀವಿ’ಗೆ ಹೆಲ್ಪ್ ಮಾಡಿದ ನಟ ಧ್ರುವ ಸರ್ಜಾ!!ಕಣ್ಣಿನಲ್ಲಿ ಪೊರೆ ಬೆಳೆದ ಮಗುವಿನ ಶಸ್ತ್ರಚಿಕಿತ್ಸೆಗೆ ಸಹಾಯ

646

ನ್ಯೂಸ್‌ ನಾಟೌಟ್: ನಟ ಧ್ರುವ ಸರ್ಜಾ ಅವರು ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿರ್ತಾರೆ. ಇದೀಗ ಪುಟ್ಟ ಮಗುವಿನ ಸಂಕಷ್ಟಕ್ಕೆ ಧ್ರುವ ಸರ್ಜಾ ಅವರು ಸಾಥ್ ನೀಡಿದ್ದಾರೆ. ಕಣ್ಣಿನಲ್ಲಿ ಪೊರೆ ಬೆಳೆದ ಪುಟ್ಟ ಕಂದಮ್ಮನ ಟ್ರೀಟ್ ಮೆಂಟ್‌ಗೆ ನಟ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದು ಎಲ್ಲರ ಮೆಚ್ಚುಗೆಗೂ ಪಾತ್ರರಾಗಿದ್ದಾರೆ.

ಪುಟ್ಟ ಮಗು ಚಿರಂಜೀವಿಗೆ ಎರಡು ಕಣ್ಣಿನಲ್ಲೂ ಪೊರೆ ಬೆಳೆದ ಹಿನ್ನೆಲೆ ಟ್ರೀಟ್ ಮೆಂಟ್‌ಗಾಗಿ ಹಣವಿಲ್ಲದೇ ಒದ್ದಾಡುತ್ತಿದ್ದರು.ಈ ವೇಳೆ ಧ್ರುವ ಅವರು ಅವರಿಗೆ ಸಹಕರಿಸಿದ್ದಾರೆ. ಮಂಜುನಾಥ ನೇತ್ರಾಲಯದ ವೈದ್ಯರ ಬಳಿ ಮಾತನಾಡಿ ಚಿಕಿತ್ಸೆ ಕೊಡಿಸಿದ್ದಾರೆ. ಹಾಗಾಗಿ ಪುಟ್ಟ ಮಗುವಿನ ಬಾಳಿನ ಆಶಾಕಿರಣವಾಗಿದ್ದಾರೆ.

ಇದೀಗ ಆತನಿಗೆ ಯಶಸ್ವಿಯಾಗಿ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಈ ಮೂಲಕ ಗಾರೆ ಕೆಲಸ ಮಾಡುವ ತಂದೆಯ ಬೆನ್ನಿಗೆ ನಿಂತಿದ್ದಾರೆ ಧ್ರುವ ಅವರು.ಅಂದಹಾಗೆ, ನಿನ್ನೆ (ಮಾ.31) ಸುದೀಪ್ (Sudeep) ಸ್ಪೈನ್ ಮ್ಯಾಸ್ಕ್ಯೂಲಾರ್ ಅಟ್ರೋಫಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಪುಟ್ಟ ಕಂದಮ್ಮ ಕೀರ್ತನಾ ಚಿಕಿತ್ಸೆಗೆ ಸಹಾಯ ಮಾಡಿದ್ದರು. ಇದರ ಚಿಕಿತ್ಸೆಗೆ 16 ಕೋಟಿ ರೂ. ಬೇಕಿರೋದ್ರಿಂದ ಸುದೀಪ್, ನಾನು ನನ್ನ ಕೈಲಾದ ಸಹಾಯ ಮಾಡಿದ್ದೀನಿ, ನೀವೆಲ್ಲರೂ ಕೈಜೋಡಿಸಿ ಎಂದು‌ ವಿಡಿಯೋ ಮೂಲಕ ಅಭಿಮಾನಿಗಳಿಗೆ ಮನವಿ ಮಾಡಿದ್ದರು. ಈ ಬೆನ್ನಲ್ಲೇ ಧ್ರುವ ಸರ್ಜಾ ಕೂಡ ಮತ್ತೊಂದು ಪುಟ್ಟ ಮಗುವಿನ ಬಾಳಿಗೆ ಬೆಳಕಾಗಿರೋದನ್ನು ನೋಡಿ ಫ್ಯಾನ್ಸ್ ಶ್ಲಾಘಿಸಿದ್ದಾರೆ.

See also  ದೇಶದ 28 ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ..! ನಿರುದ್ಯೋಗಿಗಳೇ ಈತನ ಬಂಡವಾಳ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget