Latestಸಿನಿಮಾ

ಪಾಕಿಸ್ತಾನದ ನಟನ ಸಿನಿಮಾ ಭಾರತದಲ್ಲಿ ಬ್ಯಾನ್ ವಿಚಾರ; ‘ಅದೇನು ನೀಲಿಚಿತ್ರವಾ?ಬ್ಯಾನ್ ಮಾಡೋದಕ್ಕೆ ‘ ಎಂದು ಕೆಂಡಾಮಂಡಲರಾದ ಪ್ರಕಾಶ್ ರಾಜ್ !!

353

ನ್ಯೂಸ್‌ ನಾಟೌಟ್: ಪಾಕ್ ನಟ ಫವಾದ್ ಖಾನ್ ನಟನೆಯ ‘ಅಬೀರ್ ಗುಲಾಲ್’ ಸಿನಿಮಾ ಭಾರತದಲ್ಲಿ ಬ್ಯಾನ್ ಮಾಡಲಾಗಿದೆ. ಇದಕ್ಕೆ ಖ್ಯಾತ ಚಿತ್ರ ನಟ ಪ್ರಕಾಶ್ ರಾಜ್ ಕೆಂಡಾಮಂಡಲರಾಗಿದ್ದಾರೆ.

ಪಾಕ್ ನಟ ಫವಾದ್ ಖಾನ್ ನಟನೆಯ ‘ಅಬೀರ್ ಗುಲಾಲ್’ ಸಿನಿಮಾ ಭಾರತದಲ್ಲಿ ಬ್ಯಾನ್ ಮಾಡೋದಕ್ಕೆ ಅದೇನು ನೀಲಿಚಿತ್ರವಾ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ 26 ಮಂದಿ ಬಲಿಯಾದ ಹಿನ್ನೆಲೆ ಪಾಕ್ ಕಲಾವಿದರಿಗೆ ಭಾರತೀಯ ಸಿನಿಮಾಗಳಲ್ಲಿ ನಟಿಸದಂತೆ ನಿಷೇಧಿಸಲಾಗಿದೆ. ಅಷ್ಟೇ ಅಲ್ಲದೇ ಅವರ ಸಾಮಾಜಿಕ ಜಾಲತಾಣ ಖಾತೆಗಳನ್ನು ನಿರ್ಬಂಧಿಸಲಾಗಿದೆ. ಈ ಬಗ್ಗೆ ಸಂದರ್ಶನವೊಂದರಲ್ಲಿ ಪ್ರಕಾಶ್ ರಾಜ್ ಮಾತನಾಡಿ, ಈ ಹೇಳಿಕೆ ನೀಡಿದ್ದಾರೆ.

ಯಾವುದೇ ಪ್ರಚಾರದ ಸಿನಿಮಾ ಆಗಿದ್ದರೂ ಯಾವುದೇ ಸಿನಿಮಾವನ್ನು ನಿಷೇಧಿಸುವುದನ್ನು ನಾನು ವಿರೋಧಿಸುತ್ತೇನೆ. ನಿಷೇಧಿಸುವ ಬಗ್ಗೆ ಜನರೇ ನಿರ್ಧರಿಸಲಿ. ನೀಲಿಚಿತ್ರ ಅಥವಾ ಮಕ್ಕಳ ಮೇಲಿನ ದೌರ್ಜನ್ಯದ ಬಗ್ಗೆ ಸಿನಿಮಾ ಅಲ್ಲ ಅಂದ್ಮೇಲೆ ನೀವು ಯಾವುದೇ ಚಿತ್ರವನ್ನು ನಿಷೇಧಿಸಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಸರ್ಕಾರದ ವಿರುದ್ಧ ನಟ ಗುಡುಗಿದ್ದಾರೆ.ಅಬೀರ್ ಗುಲಾಲ್’ ಮೇ 9ಕ್ಕೆ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಅದಕ್ಕೀಗ ಭಾರತದಲ್ಲಿ ಬ್ರೇಕ್ ಬಿದ್ದಿದೆ. ಫವಾದ್ ಖಾನ್‌ಗೆ ನಾಯಕಿಯಾಗಿ ಬಾಲಿವುಡ್ ಬೆಡಗಿ ವಾಣಿ ಕಪೂರ್ ನಟಿಸಿದ್ದರು.

See also  ಕೊಡಗು: ಪ್ರವಾಸಿಗರಿಗೆ ನದಿ, ತೊರೆ, ಜಲಪಾತಗಳಿಗೆ ಇಳಿಯುವುದು, ಸ್ನಾನ ಮಾಡುವುದನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ..! ​ಮುಂದಿನ 3 ದಿನ ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget