ಕ್ರೀಡೆ/ಸಿನಿಮಾ

ನಟ ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ,ವ್ಯಕ್ತಿಯೋರ್ವನಿಂದ 2 ಕೋಟಿಗೆ ಬೇಡಿಕೆ,ಯಾರೀತ?

171

ನ್ಯೂಸ್‌ ನಾಟೌಟ್‌:  ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ವ್ಯಕ್ತಿಯೋರ್ವನಿಂದ ಜೀವ ಬೆದರಿಕೆ ಸಂದೇಶ ಬಂದಿದೆ. ಆತ 2 ಕೋಟಿ ರೂ.ಗೆ ಬೇಡಿಕೆಯಿಟ್ಟಿರುವುದಾಗಿ ಮುಂಬೈ ಟ್ರಾಫಿಕ್ ಪೊಲೀಸರಿಗೆ ಸಂದೇಶ ಕಳುಹಿಸಿದ್ದಾರೆ.

ಸಲ್ಮಾನ್ ಖಾನ್ ಜೀವಕ್ಕೆ ಈ ಹಿಂದೆಯೂ ಬೆದರಿಕೆ ಬಂದಿದ್ದು, ಈ ಬಾರಿ ಬೆದರಿಕೆ ಸಂದೇಶದ ಜೊತೆಗೆ 2 ಕೋಟಿ ರೂ. ಬೇಡಿಕೆಯಿಟ್ಟಿದ್ದಾರೆ.ಹಣ ನೀಡದಿದ್ದರೆ ಹತ್ಯೆ ಮಾಡುವುದಾಗಿ ಸಂದೇಶವನ್ನೂ ಕಳುಹಿಸಲಾಗಿದೆ.ಬೆದರಿಕೆ ಸಂದೇಶ ಬಂದ ಬೆನ್ನಲ್ಲೇ ಮುಂಬೈನ ವರ್ಲಿ ಜಿಲ್ಲೆಯ ಪೊಲೀಸರು ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.ಸದ್ಯ ಆ ವ್ಯಕ್ತಿ ಅಪರಿಚಿತನಾಗಿದ್ದು ತನಿಖೆ ಮುಂದುವರಿದಿದೆ.

ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಬಂದಿರುವುದು ಇದೇ ಮೊದಲಲ್ಲ. ಈ ಹಿಂದೆ 2022 ರಲ್ಲಿ ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆಯ ಪತ್ರವು ಅವರ ನಿವಾಸದ ಬಳಿಯ ಬೆಂಚ್‌ನಲ್ಲಿ ಕಂಡುಬಂದಿತ್ತು. ಮಾರ್ಚ್ 2023ರಲ್ಲಿ ಗೋಲ್ಡಿ ಬ್ರಾರ್ ಅವರು ಕಳುಹಿಸಿದ್ದಾರೆಂದು ಆರೋಪಿಸಲಾದ ಇಮೇಲ್ ಕೂಡ ಖಾನ್‌ಗೆ ಸಿಕ್ಕಿತ್ತು. 2024 ರಲ್ಲಿ, ಇಬ್ಬರು ಅಪರಿಚಿತ ವ್ಯಕ್ತಿಗಳು ನಕಲಿ ಗುರುತುಗಳನ್ನು ಬಳಸಿಕೊಂಡು ಪನ್ವೆಲ್‌ನಲ್ಲಿರುವ ಖಾನ್ ಅವರ ಫಾರ್ಮ್ಹೌಸ್‌ಗೆ ಅತಿಕ್ರಮಣ ಮಾಡಲು ಪ್ರಯತ್ನಿಸಿದ್ದರು.

See also  ಗೆಳತಿಯ ಮನೆಯಿಂದಲೇ ಚಿನ್ನ ಕದ್ದ ಈ ನಟಿ ಯಾರು..? ವಿಚಾರಣೆ ವೇಳೆ ಬಯಲಾಯ್ತು ರಹಸ್ಯ..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget