ರಾಜಕೀಯರಾಜ್ಯಸಿನಿಮಾ

ನಟ ಶಿವರಾಜ್ ಕುಮಾರ್ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಿಎಂ, ಮೂತ್ರಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಶಿವಣ್ಣ

ನ್ಯೂಸ್ ನಾಟೌಟ್: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು(ಜ.27) ನಟ ಶಿವರಾಜ್ ಕುಮಾರ್ ಬೆಂಗಳೂರಿನ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಬಾಗಿಲ ಬಳಿ ಬಂದು ಸಿಎಂ ಅವರನ್ನು ಬರ ಮಾಡಿಕೊಂಡ ಶಿವರಾಜ್ ಕುಮಾರ್ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.

ಭೇಟಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆಯ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ ಎಂದು ತಿಳಿಸಿದರು.
ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆಮಾಡಿ ಆರೋಗ್ಯ ವಿಚಾರಿಸಿದಾಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ತೊಂದರೆ ಇಲ್ಲ ಎಂದು ತಿಳಿಸಿದ್ದರು. ಮುಂದಿನ ತಿಂಗಳಿನಿಂದ ಚಿತ್ರೀಕರಣಕ್ಕೆ ತೆರಳುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದರು.

ಮೂತ್ರಕೋಶದ ಕ್ಯಾನ್ಸರ್ ಸಂಬಂಧ ಆಪರೇಷನ್ ಮಾಡಿಸಿಕೊಳ್ಳಲು ನಟ ಶಿವರಾಜಕುಮಾರ್ ಡಿ.18 ರಂದು ಅಮೆರಿಕಕ್ಕೆ ತೆರಳಿದ್ದರು. ಬಳಿಕ ಡಿ.24 ರಂದು ಆಪರೇಷನ್‌ ಗೆ ಒಳಗಾಗಿದ್ದು, ಇದೀಗ ಸಂಪೂರ್ಣ ಗುಣಮುಖರಾಗಿ ಭಾನುವಾರ(ಜ.26) ಬೆಂಗಳೂರಿಗೆ ಮರಳಿದ್ದರು.

Click

Related posts

ಬಾಲರಾಮನ ಪ್ರತಿಷ್ಠೆಯಂದೇ ರಾಮಮಂದಿರ ಉದ್ಘಾಟಿಸಿದ ಸಿದ್ದರಾಮಯ್ಯ..! ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ ಸಿಎಂ

“ಹಿಂದುತ್ವದ ಹೆಸರಲ್ಲಿ ಯುವಕರ ದಾರಿ ತಪ್ಪಿಸುತ್ತಿದ್ದಾರೆ ಶಾಸಕ ಹರೀಶ್ ಪೂಂಜಾ”

LIVE: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನಕ್ಕೆ ಕ್ಷಣ ಗಣನೆ