ಕ್ರೈಂ

ಡ್ರಗ್ಸ್ ಕೇಸ್ ನಲ್ಲಿ ನಟಿ ರಾಗಿಣಿಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್ , ರಾಗಿಣಿ ವಿರುದ್ಧ ಸಾಕ್ಷಿಯೇ ಇಲ್ಲ

ನ್ಯೂಸ್ ನಾಟೌಟ್: ಡ್ರಗ್ಸ್ ಕೇಸ್ ನಲ್ಲಿ ಸಿಕ್ಕಿಹಾಕಿಕೊಂಡು ಒದ್ದಾಟ ನಡೆಸುತ್ತಿದ್ದ ನಟಿ ರಾಗಿಣಿ ದ್ವಿವೇದಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ 2020ರ ಸೆಪ್ಟೆಂಬರ್​ನಲ್ಲಿ ರಾಗಿಣಿ ಅವರನ್ನು ಬಂಧಿಸಲಾಗಿತ್ತು. ರಾಗಿಣಿ ಕೆಲವು ದಿನ ಜೈಲಿನಲ್ಲೂ ಇದ್ದರು. ಇದೀಗ ಬರೋಬ್ಬರಿ ನಾಲ್ಕು ವರ್ಷಗಳ ಬಳಿಕ ಡ್ರಗ್ಸ್​ ಕೇಸ್​ನಲ್ಲಿ ರಾಗಿಣಿ ನಿರಪರಾಧಿ ಎಂಬುದು ಸಾಬೀತಾದಂತಾಗಿದೆ. ನಟಿಯ ವಿರುದ್ಧ ಯಾವುದೇ ಸಾಕ್ಷ್ಯ ಸಿಗದ ಕಾರಣ ಕೇಸ್ ಖುಲಾಸೆ ಮಾಡಿ ಹೈಕೋರ್ಟ್​ ಆದೇಶ ನೀಡಿದೆ. ಇದರಿಂದ ರಾಗಿಣಿ ಅವರು ರಿಲೀಫ್ ಆಗಿದ್ದಾರೆ.

ಡ್ರಗ್ಸ್ ಮಾಫಿಯಾದೊಂದಿಗೆ ನಂಟು ಹೊಂದಿದ ಆರೋಪ ರಾಗಿಣಿ ಮೇಲೆ ಇತ್ತು. ಪಾರ್ಟಿ ಆಯೋಜಿಸಿ ಡ್ರಗ್ಸ್ ಬಳಕೆಗೂ ಅವರು ಅವಕಾಶ ಮಾಡಿಕೊಟ್ಟಿದ್ದರು ಎನ್ನಲಾಗಿತ್ತು. ಈ ಕಾರಣಕ್ಕೆ ಎನ್​ಡಿಪಿಎಸ್ ಅಡಿಯಲ್ಲಿ ಅವರ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಆದರೆ ಈ ಬಗ್ಗೆ ಯಾವುದೇ ಸಾಕ್ಷ್ಯಾಧಾರ ಸಿಕ್ಕಿಲ್ಲ ಎನ್ನಲಾಗಿದೆ. ಕೇವಲ ಸಹ ಆರೋಪಿಗಳ ಹೇಳಿಕೆ ಆಧರಿಸಿ ರಾಗಿಣಿ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಆದರೆ, ಯಾವುದೇ ಸಾಕ್ಷ್ಯಗಳನ್ನು ಒದಗಿಸಿಲ್ಲ ಎಂದು ರಾಗಿಣಿ ಪರ ವಕೀಲ ಎ. ಮೊಹಮ್ಮದ್ ತಾಹಿರ್ ವಾದ ಮಾಡಿದ್ದರು. ಈ ವಾದವನ್ನು ಪರಿಣಿಸಿದ ನ್ಯಾಮೂರ್ತಿ ಹೇಮಂತ್ ಚಂದನ್ ಗೌಡರ್ ಅವರ ನೇತೃತ್ವದ ಹೈಕೋರ್ಟ್ ಏಕಸದಸ್ಯ ಪೀಠ ಪ್ರಕರಣ ರದ್ದುಪಡಿಸಿ ಆದೇಶ ಹೊರಡಿಸಿದೆ.

Related posts

ಬಿಜೆಪಿ ಹಿರಿಯ ನಾಯಕ ಉಮೇಶ್ ವಾಗ್ಲೆ ಇನ್ನಿಲ್ಲ, ಇಂದು ಸಂಜೆ ಅಂತ್ಯಕ್ರಿಯೆಗೆ ಸಿದ್ಧತೆ

ಸಂಬಂಧಿಕರ ಮನೆಯಲ್ಲಿ ಸ್ನಾನಕ್ಕೆಂದು ಹೋಗಿದ್ದ ಮಹಿಳೆ ಬಾತ್ ​ರೂಮ್ ​ನಲ್ಲಿ ಸಾವು..! ನಿಗೂಢ ಸಾವಿನ ರಹಸ್ಯವೇನು..?

ಮಧ್ಯರಾತ್ರಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ..! ಹತ್ತಾರು ವಾಹನಗಳು ಪುಡಿ-ಪುಡಿ..!ಇಲ್ಲಿದೆ ವಿಡಿಯೋ