ನ್ಯೂಸ್ ನಾಟೌಟ್ : ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ತಾಣ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಇಂದು (ಆ.20ರ ಬುಧವಾರ) ಕಟೀಲು ದೇವಸ್ಥಾನಕ್ಕೆ ಆಗಮಿಸಿದ್ದ ನಟಿ ರಕ್ಷಿತಾ
ಪ್ರೇಮ್ ಅವರು ಭೇಟಿ ನೀಡಿದರು.
ಕಾಪುವಿಗೆ ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರ್ಶನ ಪಡೆದರು.ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಅವರು ವ್ಯವಸ್ಥಾಪನಾ ಸಮಿತಿ ಮತ್ತು
ಅಭಿವೃದ್ಧಿ ಸಮಿತಿಯ ಸಮ್ಮುಖದಲ್ಲಿ ಗೌರವಿಸಿ ಅಮ್ಮನ ಅನುಗ್ರಹ ಪ್ರಸಾದ ನೀಡಿದರು.ರಕ್ಷಿತಾ ಪ್ರೇಮ್ ಅನ್ನದಾನ ಸೇವೆ ನೀಡಿ,
ನಂತರ ಇಷ್ಟಾರ್ಥ ಸಿದ್ದಿಗಾಗಿ ನೆರವೇರುವ ಘಂಟಾನಾದ ಸೇವೆಯನ್ನು ಮಾಡಿದರು.