Latest

ಮತ್ತೊಂದು ಯಡವಟ್ಟು ಮಾಡಿಕೊಂಡ ರಶ್ಮಿಕಾ ಮಂದಣ್ಣ: ಸಂದರ್ಶನದಲ್ಲಿ ನಟಿ ಹೇಳಿದ್ದೇನು?

656

ನ್ಯೂಸ್ ನಾಟೌಟ್ :ಕೆಲವು ಹೇಳಿಕೆಗಳಿಂದ ವಿವಾದಕ್ಕೀಡಾಗುವ ಕಾಂಟ್ರವರ್ಸಿ ಕ್ವೀನ್ ರಶ್ಮಿಕಾ ಮಂದಣ್ಣ ಇದೀಗ ಮತ್ತೊಂದು ಹೇಳಿಕೆ ನೀಡಿ, ವಿವಾದ ಹುಟ್ಟುಹಾಕಿದ್ದಾರೆ. ಈ ಹೇಳಿಕೆ ಭಾರಿ ವೈರಲ್ ಆಗಿದೆ.

ಇತ್ತೀಚಿಗೆ ಸಂದರ್ಶನವೊಂದರಲ್ಲಿ ನಟಿ ರಶ್ಮಿಕಾ ಮಂದಣ್ಣ ಮಾತನಾಡುತ್ತಾ, ಕೊಡವ ಸಮುದಾಯದಿಂದ ಇಲ್ಲಿಯವರೆಗೆ ಯಾರೂ ಸಿನಿಮಾ ಇಂಡಸ್ಟ್ರಿಗೆ ಬಂದಿಲ್ಲ, ನಾನೇ ಫಸ್ಟ್ ಅನ್ನಿಸುತ್ತೆ ಸಿನಿಮಾ ಇಂಡಸ್ಟ್ರಿಗೆ ನಟಿಯಾಗಿ ಬಂದಿರೋದು ಎಂದು ಹೇಳಿದ್ದಾರೆ. ಈ ವೇಳೆ ಸಂದರ್ಶಕಿ ನೀವೇ ಮೊದಲು ಎಂದು ಜನ ನಿರ್ಧರಿಸಿದ್ದಾರಾ ಎಂದು ಕೇಳಿದಾಗ, ಖಂಡಿತ ಕೊಡವ ಸಮುದಾಯದವರು ಇದನ್ನು ನಿರ್ಧರಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ರೀತಿ ಹೇಳಿಕೆ ನೀಡುವ ಮೂಲಕ ನಟಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಈಗಾಗಲೇ ಕೊಡವ ಸಮುದಾಯದಿಂದ ಸಾಕಷ್ಟು ನಾಯಕಿಯರು ಚಿತ್ರರಂಗಕ್ಕೆ ಬಂದಿದ್ದು, ಖ್ಯಾತಿಯನ್ನು ಗಳಿಸಿದ್ದಾರೆ. ನಟಿ ಪ್ರೇಮ, ನಿಧಿ ಸುಬ್ಬಯ್ಯಾ, ಹರ್ಷಿಕ ಪೂಣಚ್ಚ, ಶುಭ್ರ ಅಯ್ಯಪ್ಪ ಸೇರಿ ಹಲವರು ಬಂದಿದ್ದಾರೆ.ನಟಿ ಪ್ರೇಮ ಹಲವು ಭಾಷೆಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದರು ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

ಇದಕ್ಕೂ ಮುನ್ನ ಕನ್ನಡ ಚಲನಚಿತ್ರೋವತ್ಸಕ್ಕೆ ನಟಿಯನ್ನು ಆಹ್ವಾನಿಸಿದಾಗ ನನಗೆ ಸಮಯವಿಲ್ಲ ಎಂದಿದ್ದರು. ಜೊತೆಗೆ ಛಾವಾ ಸಿನಿಮಾದ ಪ್ರಚಾರದ ಸಂದರ್ಭದಲ್ಲಿ `ನಾನು ಹೈದರಾಬಾದ್‌ನವಳು’ ಎಂದು ಹೇಳಿ ವಿವಾದಕ್ಕೆ ಒಳಗಾಗಿದ್ದರು.ಇದೀಗ ಮತ್ತೊಂದು ವಿವಾದದಲ್ಲಿ ಸಿಲುಕಿದ್ದಾರೆ.

See also  ಕಂಠಪೂರ್ತಿ ಕುಡಿದು ಪ್ರಾಣಬಿಟ್ಟ ವಿದ್ಯಾರ್ಥಿನಿ..! ಹಾಸ್ಟೆಲ್‌ ನಲ್ಲಿ ವಾಸಿಸುತ್ತಿದ್ದ ಯುವತಿ..!
  Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget