ಕಾಸರಗೋಡು : ಬ್ರೇನ್ ಟ್ಯೂಮರ್ ಗೆ ಮಲಯಾಳಂನ ಖ್ಯಾತ ಚಲನಚಿತ್ರ ನಟಿ ಶರಣ್ಯ ಶಶಿ ನಿಧನರಾಗಿದ್ದಾರೆ. 2012ರಲ್ಲಿ ಅವರಿಗೆ ಬ್ರೇನ್ ಟ್ಯೂಮರ್ ಇರುವುದು ಪತ್ತೆಯಾಗಿತ್ತು. ಸುಮಾರು ಹನ್ನೊಂದು ಬಾರಿ ಸರ್ಜರಿಗೆ ಒಳಗಾಗಿದ್ದರು. ಕಳೆದ ಮೇ ತಿಂಗಳಲ್ಲಿ ಕೊರೊನಾ ಸೋಂಕಿಗೊಳಾಗಿ ಚೇತರಿಸಿಕೊಂಡಿದ್ದರು. ಇದೀಗ ಮತ್ತೆ ಬ್ರೇನ್ ಟ್ಯೂಮರ್ ಗೆ ಒಳಗಾಗಿದ್ದರು. ಹೀಗಾಗಿ ಕಳೆದ ಕೆಲ ದಿನಗಳ ಹಿಂದೆ ತಿರುವನಂತಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.