ವಿಡಿಯೋವೈರಲ್ ನ್ಯೂಸ್ಸಿನಿಮಾ

ಶಿಲ್ಪಾ ಶೆಟ್ಟಿಗೆ ಇಡಿಯಿಂದ ಆಸ್ತಿ ಜಪ್ತಿಯ ಶಾಕ್..! ದೈವಕ್ಕೆ ಮೊರೆ ಹೋದ ನಟಿ ಹೇಳಿದ್ದೇನು..? ಇಲ್ಲಿದೆ ವಿಡಿಯೋ

243

ನ್ಯೂಸ್ ನಾಟೌಟ್: ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ಇಡಿ ಶಾಕ್ ಬೆನ್ನಲ್ಲೇ ದೈವದ ಮೊರೆ ಹೋಗಿದ್ದಾರೆ. ದೈವ ಕೋಲದಲ್ಲಿ ಭಾಗಿಯಾಗಿ ನಟಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೈವ ಕೋಲದ ವಿಡಿಯೋವನ್ನು ನಟಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

ತುಳುನಾಡಿನ ಹೆಣ್ಣು. ನನ್ನ ಮೂಲ ಊರಿಗೆ ಬಂದಿದ್ದೇನೆ. ನನ್ನ ಮಕ್ಕಳಿಗೆ ನನ್ನ ಸಂಸ್ಕೃತಿಯನ್ನು ಪರಿಚಯಿಸುತ್ತಿದ್ದೇನೆ. ಮಂಗಳೂರಿನಲ್ಲಿ ನಾಗಮಂಡಲ ಹಾಗೂ ಕೊಡಮಣಿತ್ತಾಯ ದೈವ ಕೋಲವನ್ನು ವೀಕ್ಷಣೆ ಮಾಡಿದ್ದೇವೆ. ಇದನ್ನು ಮಕ್ಕಳು ನೋಡಿ ಅಚ್ಚರಿಪಟ್ಟರು. ಭಕ್ತಿಯಿಂದ ಅನುಸರಿಸುವ ಶಕ್ತಿ ಮತ್ತು ನಂಬಿಕೆಯನ್ನು ಯಾವಾಗಲೂ ನನ್ನ ಆಕರ್ಷಿಸುತ್ತದೆ ಎಂದು ಶಿಲ್ಪಾ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಇತ್ತೀಚೆಗೆ ತಮ್ಮ ತಾಯಿ ಸುನಂದಾ ಮತ್ತು ಮಕ್ಕಳ ಜೊತೆ ದೈವ ಕೋಲ ವೀಕ್ಷಿಸಿದ್ದಾರೆ. ತಮ್ಮ ಹುಟ್ಟೂರಿನಲ್ಲಿ ಕೆಲ ಕಾಲ ಸಮಯ ಕಳೆದಿದ್ದಾರೆ. ದೈವ ಕೋಲದ ವಿಡಿಯೋ ಶೇರ್ ಮಾಡಿ ಈ ಬಗ್ಗೆ ನಟಿ ವಿವರಿಸಿದ್ದಾರೆ.

2022ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದಿ ಅಡಿ ಜಾರಿ ನಿರ್ದೇಶನಾಲಯ ಪ್ರಕರಣವನ್ನು ದಾಖಲಿಸಿದ್ದು, ಜಾರಿ ನಿರ್ದೇಶನಾಲಯವು 97.97 ಕೋಟಿ ರೂಪಾಯಿ ಮೊತ್ತದ ಸ್ಥಿರ ಹಾಗೂ ಚರಾಸ್ತಿಯನ್ನು ಇತ್ತೀಚೆಗೆ ಜಪ್ತಿ ಮಾಡಿದೆ. ಜಪ್ತಿಯಾದ ಆಸ್ತಿಗಳಲ್ಲಿ ಪುಣೆಯಲ್ಲಿರುವ ಬಂಗ್ಲೆ, ಫ್ಲಾಟ್ ಹಾಗೂ ಇಕ್ವಿಟಿ ಷೇರು ಕೂಡ ಹೊಂದಿವೆ. ಉಕ್ರೇನ್‌ನಲ್ಲಿ ಬಿಟ್ ಕಾಯಿನ್ ಮೈನಿಂಗ್ ಫಾರ್ಮ್ ಶುರು ಮಾಡುವುದಕ್ಕೆ ಶಿಲ್ಪಾ ಮತ್ತು ರಾಜ್ ಕುಂದ್ರಾ ದಂಪತಿ ಅಮಿತ್ ಭಾರದ್ವಾಜ್ ಬಳಿ 285 ಬಿಟ್ ಕಾಯಿನ್ ಪಡೆದಿದ್ದಾರೆ. ಸದ್ಯ ಈ ಬಿಟ್ ಕಾಯಿನ್ ಮೌಲ್ಯ ಸುಮಾರು 150 ಕೋಟಿ ರೂ. ಎಂದು ಎಂದು ತನಿಖಾ ಸಂಸ್ಥೆ ಹೇಳಿದೆ. ಎನ್ನಲಾಗಿದೆ. ಈ ಬಗ್ಗೆ ತನಿಖೆಗಳು ಮತ್ತು ಆಸ್ತಿ ಮುಟ್ಟುಗೋಲು ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ ನಟಿ ದೈವದ ಮೊರೆ ಹೋದದ್ದು ಚರ್ಚೆಗೆ ಕಾರಣವಾಗಿದೆ.

See also  ಮೇಕೆ ಮೇಯಿಸುತ್ತಿದ್ದ ಮಹಿಳೆಯನ್ನು ಹೊತ್ತೊಯ್ದು ಹುಲಿ..! ಅರಣ್ಯ ವೀಕ್ಷಣೆಯ ಟವರ್ ಮೇಲೆ ಮೃತದೇಹ ಪತ್ತೆ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget