ರಾಜಕೀಯವೈರಲ್ ನ್ಯೂಸ್ಸಿನಿಮಾ

ಪ್ರಧಾನಿ ಮೋದಿಯನ್ನು ಹಿಂದಿಕ್ಕಿದ ಶ್ರದ್ಧಾ ಕಪೂರ್..! ಏನಿದು ಹೊಸ ಬೆಳವಣಿಗೆ..?

231

ನ್ಯೂಸ್ ನಾಟೌಟ್: ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಅಭಿನಯದ ಸ್ತ್ರೀ 2 ಚಿತ್ರ ಭಾರಿ ಯಶಸ್ಸು ಕಂಡಿದೆ. ಇದೀಗ ಶ್ರದ್ಧಾ ಕಪೂರ್ ಇನ್‌ಸ್ಟಾಗ್ರಾಂ ಫಾಲೋವರ್ಸ್ ಸಂಖ್ಯೆ ಬರೋಬ್ಬರಿ 91.4 ಮಿಲಿಯನ್‌ಗೆ ಎರಿಕೆಯಾಗಿದೆ. ಇನ್‌ಸ್ಟಾಗ್ರಾಂ ಫಾಲೋವರ್ಸ್ ಸಂಖ್ಯೆಯಲ್ಲಿ ನಟಿ ಶ್ರದ್ಧಾ ಕಪೂರ್, ಪ್ರಧಾನಿ ನರೇಂದ್ರ ಮೋದಿಯನ್ನೇ ಹಿಂದಿಕ್ಕಿದ್ದಾರೆ.

ಪ್ರಧಾನಿ ಮೋದಿ ಇನ್‌ಸ್ಟಾಗ್ರಾಂನಲ್ಲಿ 91.3 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಟ್ವಿಟರ್‌ನಲ್ಲಿ ಮೋದಿ 101.2 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಇದೀಗ ಇನ್‌ಸ್ಟಾಗ್ರಾಂನಲ್ಲಿ ಅತೀ ಹೆಚ್ಚು ಫಾಲೋವರ್ಸ್ ಹೊಂದಿದ ಭಾರತದ ಸೆಲೆಬ್ರೆಟಿಗಳ ಪೈಕಿ ನಟಿ ಶ್ರದ್ದಾ ಕಪೂರ್ ಮೂರನೇ ಸ್ಥಾನಕ್ಕೇರಿದ್ದಾರೆ. ಮೊದಲ ಸ್ಥಾನದಲ್ಲಿರುವ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಬರೋಬ್ಬರಿ 271 ಮಿಲಿಯನ್ ಇನ್‌ಸ್ಟಾ ಫಾಲೋವರ್ಸ್ ಹೊಂದಿದ್ದಾರೆ. ಎರಡನೇ ಸ್ಥಾನದಲ್ಲಿರುವ ನಟಿ ಪ್ರಿಯಾಂಕಾ ಚೋಪ್ರಾ 91.8 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ನರೇಂದ್ರ ಮೋದಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

ನಟಿ ಶ್ರದ್ಧಾ ಕಪೂರ್ ಅತೀ ಕಡಿಮೆ ಅವಧಿಯಲ್ಲಿ 3ನೇ ಸ್ಥಾನಕ್ಕೇರಿದ ಹೆಗ್ಗಳಿಕೆಗೆ ಪಾತ್ರವಾಗಿದ್ದರೆ. ಶ್ರದ್ಧಾ ಕಪೂರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಸ್ತ್ರೀ 2 ಚಿತ್ರ ಈಗಾಗಲೇ 300 ಕೋಟಿ ರೂಪಾಯಿ ಗಳಿಕೆ ಕಂಡಿದೆ. ಇದೀಗ ಬಿಡುಗಡೆಯಾಗಿರುವ ಸ್ತ್ರೀ 2 ಚಿತ್ರ, 2018ರಲ್ಲಿ ಬಿಡುಗಡೆಯಾದ ಸ್ತ್ರೀ ಚಿತ್ರದ 2ನೇ ಭಾಗವಾಗಿದೆ.

Click

https://newsnotout.com/2024/08/govt-hospital-chintamani-kannadanews-police-case-old-age-issue/
https://newsnotout.com/2024/08/fir-on-protested-perents-kannada-news-school-students-issue/
https://newsnotout.com/2024/08/serial-ki-kannada-news-kkenya-42-womens-are-suspence-nomore-j/
https://newsnotout.com/2024/08/baby-bites-snake-kannada-news-and-doctor-reveals-fact/
https://newsnotout.com/2024/08/bantwal-netravathi-river-issue-kannada-news-body-found/
https://newsnotout.com/2024/08/hijra-case-boy-suspence-issue-at-bengaluru-kannada-news-police/
See also  ಬಿಸಿಲಿಗೆ ಮರದಡಿ ಕುಳಿತ್ತಿದ್ದವರ ಮೇಲೆ ಹರಿದ ಪಿಕಪ್..! ನಾಲ್ವರ ದುರಂತ ಅಂತ್ಯ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget