ನ್ಯೂಸ್ ನಾಟೌಟ್: ಕರ್ನಾಟಕ ಇತಿಹಾಸದಲ್ಲಿ ಇಂದೆಂದೂ ಕಂಡು ಕೇಳರಿಯದೆ ಬೆಳವಣಿಗೆಯೊಂದು ನಡೆದಿದೆ.
ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಎಡಿಜಿಪಿ ಅಮೃತ್ ಪೌಲ್ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಕರೆತಂದಿದ್ದಾರೆ. ಇದೇ ಮೊದಲ ಬಾರಿಗೆ ಎಡಿಜಿಪಿ ಶ್ರೇಯಾಂಕ್ ಅಧಿಕಾರಿಯನ್ನು ಬಂಧಿಸಲಾಗಿದೆ. ರಾಜ್ಯದ ಇತಿಹಾಸದಲ್ಲೇ ಮೊದಲ ಪ್ರಕರಣವಾಗಿದೆ. ಅಮೃತ್ ಪಾಲ್ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದರು. ಇತ್ತೀಚೆಗೆ ನಡೆದ ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಅಮೃತ್ ಪಾಲ್ ಕೂಡಾ ಸಾಥ್ ನೀಡಿದ್ದಾರೆ ಎಂಬ ಆರೋಪವಿತ್ತು. ಈ ಹಿನ್ನೆಲೆಯಲ್ಲಿ ನಾಲ್ಕು ಬಾರಿ ಅವರನ್ನು ಸಿಐಡಿ ಪೊಲೀಸರು ವಿಚಾರಣೆಗೆ ಕರೆದಿದ್ದರು. ನಾಲ್ಕನೇ ಬಾರಿ ವಿಚಾರಣೆಗೆ ಹಾಜರಾಗಿದ್ದಾಗ ಅವರನ್ನು ಬಂಧಿಸಲಾಗಿದೆ.