ಕರಾವಳಿಮಂಗಳೂರುವೈರಲ್ ನ್ಯೂಸ್

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ರಜತ ಮಹೋತ್ಸವಕ್ಕೆ ದಿನಗಣನೆ, ಜಗದ್ಗುರು ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವಕ್ಕೆ ಸಿದ್ಧತೆ

250

ನ್ಯೂಸ್ ನಾಟೌಟ್: ನ.26 ಹಾಗೂ ಜನವರಿ 1 ಮತ್ತು 2ರಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ ಮತ್ತು ಜಗದ್ಗುರು ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ ಅಂಗವಾಗಿ ವಿವಿಧ ಧಾರ್ಮಿಕ, ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಕುರಿತಂತೆ ಸೋಮವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಯಿತು, ಈ ವೇಳೆ ಮಾತನಾಡಿದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ, ‘ವಿಶ್ವ ಭೂಪಟದಲ್ಲಿ ಕರಾವಳಿಯು ಶಿಕ್ಷಣ ಕಾಶಿ, ಸಾಂಸ್ಕೃತಿಕ ಶ್ರದ್ಧಾ ಕೇಂದ್ರ ಎಂದು ಗುರುತಿಸಲ್ಪಟ್ಟಿದೆ. ಈ ಪ್ರದೇಶದಲ್ಲಿ ಶೈಕ್ಷಣಿಕ ಸಂಸ್ಥೆ ತೆರೆಯಬೇಕು ಎಂಬ ಉದ್ದೇಶದಿಂದ ಶ್ರೀಆದಿಚುಂಚನಗಿರಿ ಮಹಾಸಂಸ್ಥಾನ ಮಠದ ವತಿಯಿಂದ 1996ರಲ್ಲಿ ಕಾವೂರು ಕುಂಜತ್ತಬೈಲಿನಲ್ಲಿ ಐದು ಎಕರೆ ಜಾಗ ಪಡೆಯಲಾಯಿತು. 1999ರಲ್ಲಿ ಅಂದಿನ ಪೀಠಾಧ್ಯಕ್ಷರಾಗಿದ್ದ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ಮಾಮೀಜಿ ಅವರು ವಿದ್ಯಾಸಂಸ್ಥೆ ಹಾಗೂ ಶಾಖಾ ಮಠ ಸ್ಥಾಪಿಸಿದ್ದರು. ಇದೀಗ ಶಾಖಾ ಮಠ ರಜತ ಮಹೋತ್ಸವ ಆಚರಿಸುತ್ತಿದೆ. ಬಿಜಿಎಸ್ ಎಜುಕೇಶನ್ ಸೆಂಟರ್(ಸಿಬಿಎಸ್ಇ) ಶಾಲೆ 25ನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ರಜತ ಮಹೋತ್ಸವ ಸಮಿತಿ ರಚಿಸಿ ಕಾರ್ಯ ಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

1974ರಲ್ಲಿ ಶ್ರೀ ಕ್ಷೇತ್ರ ಆದಿಚುಂಚನಗಿರಿ ನಾಥ ಪರಂಪರೆಯ 71ನೇ ಪೀಠಾಧ್ಯಕ್ಷ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರು ಪೀಠಾರೋಹಣ ಮಾಡಿದರು. ಈ ಸುಸಂದರ್ಭಕ್ಕೆ 50 ವರ್ಷಗಳು ಇದೀಗ ಸಂದಿದೆ. ಈ ಹಿನ್ನೆಲೆಯಲ್ಲಿ ಈಗಿನ ಪೀಠಾಧಿಪತಿ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರಿಗೆ ಗುರುವಂದನೆ ಹಾಗೂ ರಜತ ತುಲಾಭಾರ ಕಾರ್ಯಕ್ರಮ ನಡೆಯಲಿದೆ ಎಂದರು.

Click

https://newsnotout.com/2024/11/tirupati-tirumala-hindu-temple-kannada-news-1000-above-workers-other-relegious/
https://newsnotout.com/2024/11/75-year-old-lady-r-by-begging-man-kannada-news-d-viral-news-d/
https://newsnotout.com/2024/11/elon-musk-kannada-news-space-x-kannada-news-isro-issue-d/
See also  131 ಕೆ.ಜಿ. ತೂಕದ ವೆಡ್ಡಿಂಗ್‌ ಗೌನ್‌ ಕೇಕ್‌ ! : ಫ್ಯಾಷನ್‌ ಶೋ ಬಳಿಕ ಗಣ್ಯರೇ ಕತ್ತರಿಸಿಕೊಂಡು ತಿಂದರು!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget