ಸುಳ್ಯ : ಇತ್ತೀಚೆಗೆ ಅಪಘಾತವೊಂದರಲ್ಲಿ ಎಂಟು ಜೀವವನ್ನು ಬಲಿ ಪಡೆದಿದ್ದ ಸುಳ್ಯ ಸಮೀಪದ ಅಡ್ಕಾರಿನಲ್ಲಿ ಕಾರೊಂದು ಅಪಘಾಕ್ಕೀಡಾಗಿದೆ. ಘಟನೆಯಲ್ಲಿ ಮೂರು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.ಕಾರು ಮೈಸೂರಿನಿಂದ ಮಂಗಳೂರಿಗೆ ತೆರಳುತ್ತಿತ್ತು ಎನ್ನಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಷ್ಟೆ. ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.