ಕರಾವಳಿಸುಳ್ಯ

ಅಡ್ಕಾರ್: ಕಟ್ಟಡದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು,ಏನಿದು ಘಟನೆ?

163

ನ್ಯೂಸ್‌ ನಾಟೌಟ್‌ : ವ್ಯಕ್ತಿಯೊಬ್ಬರು ಕಟ್ಟಡದಿಂದ ಕಾಲುಜಾರಿ ಬಿದ್ದು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಮಾ.7ರಂದು   ವರದಿಯಾಗಿದೆ.

ಅಡ್ಕಾರ್ ಜಿ.ಅಬ್ದುಲ್ಲಾ ಎಂಬುವವರ ಮನೆಗೆ ಪೈಟಿಂಗ್ ಕೆಲಸಕ್ಕಾಗಿ ಬಂದಿದ್ದ ಅಡೂರು ಪಳ್ಳಂಗೊಡು ನಿವಾಸಿ ಜಬ್ಬಾರ್ ಎಂಬುವವರು ನೀರು ಹಾಕಿ ತೊಳೆಯುತ್ತಿರುವ ಸಂದರ್ಭದಲ್ಲಿ‌ ಕಾಲುಜಾರಿ ಕಟ್ಟಡದಿಂದ ಕೆಳಗೆ ಬಿದ್ದಿದ್ದರು.ತಲೆಗೆ ಗಂಭೀರ ಗಾಯಗಳಾಗಿದ್ದ ಹಿನ್ನಲೆ ಕೂಡಲೇ ಅವರನ್ನು ಸುಳ್ಯ ಕೆವಿಜಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಹೋಗಲಾಗಿತ್ತಾದರೂ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದ ಕಾರಣ  ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ. ಮೃತರು ಪತ್ನಿ ಮೂವರು ಮಕ್ಕಳನ್ನು ಅಗಲಿದ್ದಾರೆ.

—————————

See also  ಕೊಕ್ಕಡ: ಮೇ.13ರಂದು ವ್ಯಕ್ತಿ ನಾಪತ್ತೆ, ಪೊಲೀಸರಿಗೆ ಪತ್ನಿಯಿಂದ ದೂರು ,ಪತ್ತೆ ಮಾಡುವಂತೆ ಮನವಿ
  Ad Widget   Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget