ನ್ಯೂಸ್ ನಾಟೌಟ್: ಅಡ್ವಾನ್ಸ್ ಹಣ ವಾಪಸ್ ಕೊಡದ ಆರೋಪದಲ್ಲಿ ನಟಿ ರಚಿತಾ ರಾಮ್ ವಿರುದ್ಧ ಫಿಲ್ಮ್ ಚೇಂಬರ್ ನಲ್ಲಿ ಮತ್ತೊಂದು ದೂರು ದಾಖಲಾಗಿದೆ.
‘’ಉಪ್ಪಿ ರುಪ್ಪಿ’ ಸಿನಿಮಾಗಾಗಿ ರಚಿತಾ ರಾಮ್ ಗೆ ಅಡ್ವಾನ್ಸ್ ನೀಡಲಾಗಿತ್ತು. ಈಗ ಹಣ ವಾಪಸ್ ಕೊಡದೇ ನಿರ್ಮಾಪಕಿಯನ್ನು ಸತಾಯಿಸುತ್ತಿದ್ದಾರೆಂದು ದೂರಲಾಗಿದೆ.
8 ವರ್ಷಗಳ ಹಿಂದೆ ಉಪ್ಪಿ ಮತ್ತು ರಚಿತಾ ನಟನೆಯಲ್ಲಿ ಸಿನಿಮಾ ಮೂಡಿಬರಬೇಕಿತ್ತು. ‘ಉಪ್ಪಿ ರುಪ್ಪಿ’ ಸಿನಿಮಾದಲ್ಲಿ ಉಪೇಂದ್ರ ಜೊತೆ ನಟಿಸಲು ನಟಿ ಒಪ್ಪಿಕೊಂಡಿದ್ದರು. ಈ ಸಿನಿಮಾವನ್ನು ವಿಜಯಲಕ್ಷ್ಮಿ ಅರಸ್ ನಿರ್ಮಾಣ ಮತ್ತು ಕೆ.ಮಾದೇಶ್ ನಿರ್ದೇಶನ ಮಾಡುವುದಿತ್ತು.
23 ಲಕ್ಷ ಸಂಭಾವನೆಗೆ ನಟಿ ಕಮಿಟ್ ಆಗಿದ್ದರು. ಮುಂಗಡವಾಗಿ 13 ಲಕ್ಷ ಅಡ್ವಾನ್ಸ್ ರೂಪದಲ್ಲಿ ಹಣ ಪಡೆದಿದ್ದರು. 2017 ರಲ್ಲಿ ಬ್ಯಾಂಕಾಕ್ ನಲ್ಲಿ ಶೂಟಿಂಗ್ ಗೆ ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿತ್ತು. ಬರುವುದಾಗಿ ಒಪ್ಪಿಕೊಂಡು ರಚಿತಾ ರಾಮ್ ಗೆ ಟಿಕೆಟ್ ಬುಕ್ ಮಾಡಿದ್ದರು. ಆದರೆ, ಬಂದಿರಲಿಲ್ಲ. 15 ದಿನಗಳ ಕಾಲ ಈಗ ಬರ್ತೀನಿ, ಆಗ ಬರ್ತೀನಿ ಅಂತಾ ಸತಾಯಿಸಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.
ಬಿಗ್ ಬಾಸ್ ಖ್ಯಾತಿಯ ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ಹಣ ವಂಚನೆ ಆರೋಪ..! 14 ಲಕ್ಷ ರೂಪಾಯಿಗೆ ಒಪ್ಪಂದ..!