ಕ್ರೈಂ

ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ, ನಾಲ್ವರು ಸಾವು

681

ಕಾರ್ಕಳ: ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ ಸಂಭವಿಸಿ 4 ಮಂದಿ ದಾರುಣ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ.

ಮೃತಪಟ್ಟ ನಾಲ್ವರು ಕಾರ್ಕಳದ ಮಿಯ್ಯಾರಿನವರು ಎಂದು ತಿಳಿದುಬಂದಿದೆ. ಘಟನೆಯ ಪರಿಣಾಮ ಐವರು ಗಂಭೀರ ಗಾಯಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ 9 ನೇ ತಿರುವಿನಲ್ಲಿ ಈ ಘಟನೆ ನಡೆದಿದ್ದು, ಚಾಲಕ ನಿಯಂತ್ರಣ ತಪ್ಪಿ ಲಾರಿ ಪ್ರಪಾತಕ್ಕೆ ಬಿದ್ದಿದೆ ಎಂದು ಹೇಳಲಾಗಿದೆ. ಈ ಘಟನೆಯಲ್ಲಿ ನಾಲ್ಕು ಮಂದಿ ಸಾವನಪ್ಪಿದ್ದು, ಐದು ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳು ಮಣಿಪಾಲು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಏರಿಕೆ ಆಗುವ ಸಾಧ್ಯತೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಆಗುಂಬೆ ಹಾಗು ಹೆಬ್ರಿ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಮೃತದೇಹಗಳನ್ನು ಮೇಲಕ್ಕೆತ್ತಲು ಸ್ಥಳೀಯರು ಸಹಕರಿಸಿದ್ದಾರೆ.

See also  ಪ್ರಶ್ನಿಸಿದ ಯುವಕನಿಗೆ ಕಪಾಳಮೋಕ್ಷ ಮಾಡಿದ ಎಂ.ಬಿ.ಪಾಟೀಲ್! ಅಷ್ಟಕ್ಕೂ ಆತ ಕೇಳಿದ್ದೇನು? ಇಲ್ಲಿದೆ ವಿಡಿಯೋ
  Ad Widget   Ad Widget   Ad Widget   Ad Widget   Ad Widget